Advertisement

ಅಕ್ರಮ ಡಿನೋಟಿಫಿಕೇಶನ್ ಪ್ರಕರಣ: ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

12:53 PM Apr 05, 2021 | Team Udayavani |

ನವದೆಹಲಿ: ಸುಮಾರು ಹತ್ತು ವರ್ಷಗಳ ಹಿಂದಿನ ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಶಾಮೀಲಾಗಿದ್ದಾರೆನ್ನಲಾದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ(ಏಪ್ರಿಲ್ 05) ತಡೆ ನೀಡಿದ್ದು, ಇದರಿಂದ ಬಿಎಸ್ ವೈಗೆ ನಿರಾಳತೆ ಸಿಕ್ಕಂತಾಗಿದೆ.

Advertisement

ಇದನ್ನೂ ಓದಿ:ಕಾರ್ಕಳ:ಪ್ರತೀಕ್ಷಾ ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಅಗ್ನಿ ಅವಘಡ:ಹಲವು ವಸ್ತುಗಳು ಬೆಂಕಿಗಾಹುತಿ

ಬಿಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಐಟಿ ಪ್ರಾಜೆಕ್ಟ್ ಗಾಗಿ ಸ್ವಾಧೀನಪಡಿಸಿಕೊಂಡಿದ್ದ 24 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಪ್ರಕರಣದಲ್ಲಿ ಬಿಎಸ್ ವೈ ಅವರ ವಿರುದ್ಧ ವಿಚಾರಣೆ ನಡೆಸುವುದಕ್ಕೆ ವಿಶೇಷ ನ್ಯಾಯಾಲಯ ನಿರಾಕರಿಸಿತ್ತು.

ಏತನ್ಮಧ್ಯೆ ಪ್ರಕರಣದ ವಿರುದ್ಧ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿಚಾರಣೆಗೆ ಅನುಮತಿ ನೀಡಿ ತೀರ್ಪು ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next