ಇಸ್ಲಾಮಾಬಾದ್: ಕಳೆದ ವಾರ ಇಸ್ಲಾಮಾಬಾದ್ ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ನ್ಯಾಯಾಂಗಕ್ಕೆ ಬೆದರಿಕೆಯೊಡ್ಡಿದ್ದ ಆರೋಪದಡಿ ದಾಖಲಾಗಿದ್ದ ಭಯೋತ್ಪಾದನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಪಾಕ್ ನ ಭಯೋತ್ಪಾದಕ ನಿಗ್ರಹ ಕೋರ್ಟ್ ಸೆಪ್ಟೆಂಬರ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ಇದನ್ನೂ ಓದಿ:ಸಿನೆಮಾಕ್ಕಲ್ಲ!; ಪದವಿ ಪರೀಕ್ಷೆಯ ಹಾಲ್ ಟಿಕೆಟ್ ಗಾಗಿ ವಿದ್ಯಾರ್ಥಿಗಳ ನೂಕು ನುಗ್ಗಲು
ಭಯೋತ್ಪಾದನಾ ನಿಗ್ರಹ ಕೋರ್ಟ್ ನ ನ್ಯಾಯಾಧೀಶರಾದ ರಾಜಾ ಜವಾದ್ ಅಬ್ಬಾಸ್ ಹಸನ್ ಅವರು, ಇಮ್ರಾನ್ ಖಾನ್ ಗೆ 1 ಲಕ್ಷ ರೂಪಾಯಿ ಶ್ಯೂರಿಟಿ ಆಧಾರದ ಮೇಲೆ ಸೆಪ್ಟೆಂಬರ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.
ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಗುರುವಾರ ರಾಜಧಾನಿಗೆ ಆಗಮಿಸುವ ಮುನ್ನ ಜಾಮೀನು ಅರ್ಜಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಆವರಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅಲ್ಲದೇ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಲಾಗಿತ್ತು ಎಂದು ವರದಿ ವಿವರಿಸಿದೆ.
ಒಂದು ವೇಳೆ ಭಯೋತ್ಪಾದನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧಿಸಲ್ಪಟ್ಟರೆ ಪಾಕಿಸ್ತಾನದಾದ್ಯಂತ ತೀವ್ರ ಪ್ರತಿಭಟನೆ ನಡೆಸುವಂತೆ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷ ಕರೆ ನೀಡಿತ್ತು.