Advertisement
ಭಾರತೀಯ ತಂತ್ರಜ್ಞರು ಮತ್ತು ವೃತ್ತಿಪರರಿಗೆ ಅಮೆರಿಕದಲ್ಲಿ ಉದ್ಯೋಗ ದೊರಕಿಸಿಕೊಡುವ ಎಚ್ 1ಬಿ ವೀಸಾ ವಿಸ್ತರಣೆಗೆ ಕಡಿವಾಣ ಹಾಕಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ ನಡೆಸಿದ್ದರು. ಇದರಿಂದಾಗಿ 7,50,000 ಭಾರತೀಯರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸಿದ್ದರು.
Related Articles
Advertisement
ಎಚ್1 ಬಿ ವೀಸಾ ಪಡೆಯುವವರು ಕನಿಷ್ಠ 1,30, 000 ಲಕ್ಷ ಅಮೆರಿಕನ್ ಡಾಲರ್(ಅಂದಾಜು ವರ್ಷಕ್ಕೆ 8 ಕೋಟಿ) ಸಂಬಳ ಹೊಂದಿರಬೇಕೆಂದು ತಿದ್ದುಪಡಿ ಮಸೂದೆಯಲ್ಲಿ ಹೇಳಲಾಗಿತ್ತು. ಇದು ಈ ಹಿಂದಿನ ನಿಯಮಕ್ಕಿಂತ ದುಪ್ಪಟ್ಟಾಗಿದ್ದು, ಇದರಿಂದ ಭಾರತೀಯ ಐಟಿ ಉದ್ಯೋಗಿಗಳಿಗೆ ಭಾರೀ ಹೊಡೆತ ನೀಡಲಿದೆ ಎಂದು ವಿಶ್ಲೇಷಿಸಲಾಗಿತ್ತು. ಎಚ್1 ಬಿ ವೀಸಾದಿಂದ ವಿದೇಶಿ(ಭಾರತ ಸೇರಿದಂತೆ)ಗರಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವುದಕ್ಕೆ ನಿರ್ಬಂಧ ಹೇರುವ ನಿಟ್ಟಿನಲ್ಲಿ ಹೊಸ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು.
ಏತನ್ಮಧ್ಯೆ ಎಚ್ 1ಬಿ ವೀಸಾ ಅವಧಿ ವಿಸ್ತರಣೆಗೆ ಕಡಿವಾಣ ಹಾಕುವ ನಿರ್ಧಾರಕ್ಕೆ ಅಮೆರಿಕದ ಸೆನೆಟ್ ನಲ್ಲಿಯೂ ತೀವ್ರ ವಿರೋಧ ವ್ಯಕ್ತವಾಗಿತ್ತು, ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಅಧ್ಯಕ್ಷ ಟ್ರಂಪ್ ಅವರ ಜತೆ ಚರ್ಚಿಸಿ ಇಂತಹ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.