ನವದೆಹಲಿ: ಕೊಯಮತ್ತೂರ್ ನಲ್ಲಿರುವ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧದ ಆರೋಪಗಳನ್ನು ಸುಪ್ರೀಂಕೋರ್ಟ್ ಗುರುವಾರ(ಅ.18) ವಜಾಗೊಳಿಸಿದೆ.
ತನ್ನಿಬ್ಬರು ಹೆಣ್ಣು ಮಕ್ಕಳ ಮನಸ್ಸನ್ನು ಪರಿವರ್ತಿಸಿ ಸದ್ಗುರು ಜಗ್ಗಿ ವಾಸುದೇವ್ ಅವರು ಬಂಧನದಲ್ಲಿ ಇರಿಸಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಕಾಮರಾಜ್ ಅವರು ಇಶಾ ಫೌಂಡೇಶನ್ ವಿರುದ್ಧ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್ ಇಶಾ ಫೌಂಡೇಶನ್ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವರದಿಯನ್ನು ಪರಿಶೀಲಿಸುವಂತೆ ಆದೇಶಿಸಿತ್ತು ಇದರ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ತಂಡ ಇಶಾ ಫೌಂಡೇಶನ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಇತ್ತ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಇಶಾ ಫೌಂಡೇಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು, ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿ ವಿಸ್ತೃತ ವರದಿ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಆದೇಶ ನೀಡಿತ್ತು ಇದೀಗ ವರದಿ ಬಂದಿದು ಕಾಮರಾಜ್ ಅವರ ಆರೋಪದ ಕುರಿತು ಇಬ್ಬರು ಪುತ್ರಿಯರನ್ನು ವಿಚಾರಿಸಿದಾಗ ತಾವು ಯಾವುದೇ ಆಮಿಷ ಅಥವಾ ಮನಪರಿವರ್ತನೆಯಿಂದ ಸನ್ಯಾಸತ್ವ ಸ್ವೀಕಾರ ಮಾಡಿಲ್ಲ ನಾವೇ ಸ್ವ ಇಚ್ಛೆಯಿಂದ ಸನ್ಯಾಸ ಸ್ವೀಕರಿಸಿದ್ದು ಸಂತೋಷವಾಗಿದ್ದೇವೆ ನಮಗೆ ಯಾವುದೇ ತೊಂದರೆ ಇಲ್ಲ ಎಂದು ವರದಿ ತಿಳಿಸಿದೆ.
ಅಲ್ಲದೆ ಇಶಾ ಫೌಂಡೇಶನ್ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು ಆಧಾರರಹಿತವಾಗಿದೆ ಎಂದು ಕೋರ್ಟ್ ಹೇಳಿದೆ.
ಇದನ್ನೂ ಓದಿ: ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು