Advertisement

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ

02:53 PM Jan 29, 2022 | Team Udayavani |

ಸುರಪುರ: ಕೋವಿಡ್‌ನಿಂದ ಮೃತಪಟ್ಟ ಕುಟುಂಬ ವರ್ಗದವರಿಗೆ ಸರಕಾರದಿಂದ ಮಂಜೂರಾದ ಒಂದು ಲಕ್ಷ ರೂ. ಪರಿಹಾರ ಧನದ ಚೆಕ್‌ನ್ನು ಶಾಸಕ ರಾಜುಗೌಡ ಶುಕ್ರವಾರ ವಿತರಿಸಿದರು.

Advertisement

ನಗರದ ತಮ್ಮ ನಿವಾಸದಲ್ಲಿ ನಾಲ್ಕು ಜನರಿಗೆ ಚೆಕ್‌ ವಿತರಿಸಿ ಮಾತನಾಡಿ, ತಾಲೂಕಿನಲ್ಲಿ ಕೋವಿಡ್‌ನಿಂದ ಮೃತಪಟ್ಟ 37 ಜನರ ಅರ್ಜಿ ಸಲ್ಲಿಕೆಯಾಗಿದ್ದವು. ಆ ಪೈಕಿ ಎಲ್ಲರಿಗೂ ಪರಿಹಾರ ದೊರಕಿದೆ. ಇನ್ನುಳಿದಂತೆ ನೇರವಾಗಿ 34 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಿಗೂ ಸರಕಾರ ಅನುಮೋದನೆ ನೀಡಿದ್ದು, ಅನುದಾನ ಬಿಡುಗಡೆಯಾದ ನಂತರ ಅವರಿಗೂ ಪರಿಹಾರ ಮೊತ್ತದ ಚೆಕ್‌ ಸಿಗಲಿದೆ ಎಂದು ಹೇಳಿದರು.

ಈ ಹಿಂದೆ ಕೆಲವರ ಪರಿಹಾರ ಚೆಕ್‌ಗಳು ಬ್ಯಾಂಕ್‌ನಲ್ಲಿ ತಾಂತ್ರಿಕ ತೊಂದರೆಯಿಂದ ನಗದೀಕರಣ ಆಗಿರಲಿಲ್ಲ. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಬ್ಯಾಂಕ್‌ ವ್ಯವಸ್ಥಾಪಕರ ಮೇಲೆ ತಾಲೂಕು ಆಡಳಿತ ಶಿಸ್ತು ಕ್ರಮ ಜರುಗಿಸಿರುವುದನ್ನು ಸ್ವಾಗತಿಸುತ್ತೇನೆ. ಈಗ ಸಮಸ್ಯೆ ಸರಿಪಡಿಸಲಾಗಿದ್ದು, ಎಲ್ಲರಿಗೂ ಚೆಕ್‌ ನಗದೀಕರಣಗೊಂಡಿವೆ ಎಂದರು. ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next