Advertisement
ರಾಜ್ಯ ಸರ್ಕಾರ ಕೇವಲ ಆದೇಶಗಳನ್ನು ಮಾಡುತ್ತಿದ್ದು ಯಾವುದೂ ಕಾರ್ಯರೂಪಕ್ಕೆ ಬರುತ್ತಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ತಪಾಸಣೆ ನಡೆಸುತ್ತಿಲ್ಲ. ರೈತರು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಸೂಕ್ತ ವ್ಯವಸ್ಥೆ ಕಲ್ಪಿಸದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಲಸೆ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ತಲುಪುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ರೂಪದ ಮನವಿ ಸಲ್ಲಿಸಿದ್ದಾರೆ.
ಕೋವಿಡ್ ರಾಷ್ಟ್ರವ್ಯಾಪ್ತಿ ಹರಡಿರುವುದರಿಂದ ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕು. ಲಾಕ್‌ಡೌನ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಎಲ್ಲಾ ರೀತಿಯ ಆರ್ಥಿಕ ಹಾಗೂ ಇನ್ನಿತರ ಸಹಾಯ ನೀಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು. ಕೋವಿಡ್ ಹರಡುವಿಕೆ ತಡೆಯಲು ಪ್ರತಿ ಜಿಲ್ಲೆಯಲ್ಲಿ ಸುಸಜ್ಜಿತ ಲ್ಯಾಬ್ ತೆರೆಯಬೇಕು.
Related Articles
ಎರಡು ಪಟ್ಟು) ನೀಡುವುದು.
Advertisement
ರೆಡ್‌ಝೋನ್ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಸೀಲ್‌ಡೌನ್ ಮಾಡುವುದು
ಕಾರ್ಮಿಕರು, ಕುಶಲಕರ್ಮಿಗಳಿಗೆ ಪ್ರತಿ ತಿಂಗಳು ಕನಿಷ್ಠ 10 ಕೆ.ಜಿ. ಅಕ್ಕಿ, ಹಾಲು, 2 ಲೀಟರ್ ಅಡುಗೆ ಎಣ್ಣೆ, ತರಕಾರಿ ಮುಂತಾದ ಪದಾರ್ಥಗಳನ್ನು ಪ್ರತಿ ತಿಂಗಳ ಮೊದಲ ವಾರ ಒದಗಿಸಬೇಕು. ಇಂದಿರಾ ಕ್ಯಾಂಟಿನ್ ಮೂಲಕ ಪ್ರತಿನಿತ್ಯ ಉಚಿತ ಆಹಾರ ಪೂರೈಸಬೇಕು.
ಕಾರ್ಮಿಕರಿಗೆ ಕೋವಿಡ್ ವೈದ್ಯಕೀಯ ತಪಾಸಣೆ ಮಾಡಿ, ಊರುಗಳಿಗೆ ಹೋಗಲು ಸಾರಿಗೆ ವ್ಯವಸ್ಥೆ ಕಲ್ಪಿಸುವುದು.
ಹೂವು, ಹಣ್ಣು, ತರಕಾರಿ ಹಾಗೂ ಬೆಳೆಗಳ ಕಟಾವಿಗೆ ಅವಕಾಶ ಕಲ್ಪಿಸಿ, ಮಾರಾಟ ಮಾಡಲು ಸಾರಿಗೆ ವ್ಯವಸ್ಥೆ, ಮಾರುಕಟ್ಟೆ ಒದಗಿಸುವುದು.
ಕೋವಿಡ್ ವಿಚಾರವಾಗಿ ನಿರ್ದಿಷ್ಟ ಜಾತಿ, ಧರ್ಮ, ವರ್ಗಗಳನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಶಾಸಕರು, ಸಂಸದರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟವರ ವಿರುದ್ದ ಕಾನೂನು ಕ್ರಮ ಜರುಗಿಸುವುದು.
ಲಾಕ್‌ಡೌನ್ ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡಲು ಕ್ರಮ ಜರುಗಿಸುವುದು.
ಕುಶಲಕರ್ಮಿ ಸಮುದಾಯಗಳಿಗೆ ವಿಶೇಷ ಪ್ಯಾಕೇಜ್ ರೂಪಿಸಿ, ಪ್ರತಿಯೊಬ್ಬರಿಗೆ ಪ್ರತಿ ತಿಂಗಳೂ ಕನಿಷ್ಠ 10,000 ರೂ.ನೀಡತಕ್ಕದ್ದು.
ಬಡವರಿಗೆ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್‌ಗಳ ಮೇಲೆ ಆಡಳಿತ ಪಕ್ಷದ ಶಾಸಕರು ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‌ಗಳನ್ನು ಅಂಟಿಸುತ್ತಿರುವುದನ್ನು ತಡೆದು ಅವರ ವಿರುದಟಛಿ ಕಾನೂನು ಕ್ರಮ ತೆಗೆದುಕೊಳ್ಳುವುದು.
ಹದಗೆಟ್ಟಿರುವ ರಾಜ್ಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕರ ನ್ನೊಳಗೊಂಡ ಕಾರ್ಯಪಡೆ ರಚಿಸುವುದು
ಕೋವಿಡ್ ಗೊಂದಲದಿಂದ ಪರೀಕ್ಷೆ ನಡೆಯುವ ಬಗ್ಗೆ ವಿದ್ಯಾರ್ಥಿಗಳಿಗಿರುವ ಗೊಂದಲ ನಿವಾರಿಸಲು ಕ್ರಮ ವಹಿಸುವುದು.
ರಿಸರ್ವ್ ಬ್ಯಾಂಕ್ ನೀಡಿರುವ ಎಲ್ಲ ಪ್ಯಾಕೇಜ್‌ಗಳು ಎಲ್ಲ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು.