Advertisement

“ಇತರರೊಂದಿಗೆ ಸಮಸ್ಯೆ ಹಂಚಿಕೊಂಡಾಗ ಪರಿಹಾರ ‘

07:10 AM Jun 29, 2018 | |

ಉಡುಪಿ: ಸಮಸ್ಯೆಯನ್ನು ಇತರರೊಂದಿಗೆ ಹಂಚಿಕೊಂಡಾಗ ಅರ್ಧದಷ್ಟು ಸಮಸ್ಯೆ ಪರಿಹಾರವಾಗುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡ ನಿಭಾಯಿಸಿಕೊಂಡು ಆತ್ಮವಿಶ್ವಾಸ ಮೂಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ದೊಡ್ಡಣಗುಡ್ಡೆ ಬಾಳಿಗಾ ಆಸ್ಪತ್ರೆಯ ಡಾ| ಪಿ.ವಿ. ಭಂಡಾರಿ ಹೇಳಿದರು. 

Advertisement

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ವಿದ್ಯಾರ್ಥಿಗಳ ಅಭಿನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.ಉದ್ಘಾಟನೆ ನೆರವೇರಿಸಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಯಶ್‌ಪಾಲ್‌ ಎ. ಸುವರ್ಣ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಯಮ, ಆತ್ಮವಿಶ್ವಾಸ ಬೆಳಸಿಕೊಂಡು ಸಂಸ್ಥೆಗೆ ಕೀರ್ತಿ ತರುವ ಕೆಲಸ ಮಾಡಬೇಕೆಂದು ಕರೆ ನೀಡಿದರು.

ವ್ಯಕ್ತಿತ್ವ ವಿಕಸನದ ಕುರಿತು ಲಯನ್ಸ್‌ನ ಎನ್‌.ಎಂ, ಹೆಗ್ಡೆ ಮಾರ್ಗದರ್ಶನ ನೀಡಿದರು. ಪ್ರಾಂಶುಪಾಲ ಡಾ| ಭಾಸ್ಕರ್‌ ಶೆಟ್ಟಿ ಎಸ್‌. ಅಧ್ಯಕ್ಷತೆ ವಹಿಸಿದ್ದರು. ಪರ್ಕಳ ಲಯನ್ಸ್‌ ಕ್ಲಬ್ಬಿನ ಅಧ್ಯಕ್ಷ ಹರೀಶ್‌ ಸುವರ್ಣ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಕೃಷ್ಣ ಭಟ್‌, ವಿಜ್ಞಾನ ವಿಭಾಗದ ಮುಖ್ಯಸ್ಥ ರಾಮಚಂದ್ರ ಅಡಿಗ ಜಿ., ಕಲಾ ವಿಭಾಗದ ಮುಖ್ಯಸ್ಥ ಡಾ| ರವಿರಾಜ ಶೆಟ್ಟಿ ಉಪಸ್ಥಿತರಿದ್ದರು. 

ವಿದ್ಯಾರ್ಥಿ ಕ್ಷೇಮಪಾÇನಾಧಿಕಾರಿ ರಾಮರಾಯ ಆಚಾರ್ಯ ಸ್ವಾಗತಿಸಿದರು. ಡಾ| ರೋಶನ್‌ ಕುಮಾರ್‌ ಶೆಟ್ಟಿ ನಿರೂಪಿಸಿ, ನಿತ್ಯಾನಂದ ಎನ್‌. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next