ಮೇಲೊಬ್ಬರು ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ.
Advertisement
ಎರಡೂವರೆ ವರ್ಷದಿಂದ ಮಹದಾಯಿ ನೀರಿಗಾಗಿ ನಿರಂತರ ಹೋರಾಟ ನಡೆಯುತ್ತಿದೆ. ಆದರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿಗಾಗಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರ ಮನೆ ಮುಂದೆಯೇ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈಗ ಚುನಾವಣೆ ಸಂದರ್ಭದಲ್ಲಾದರೂ ತೀರ್ಮಾನ ಕೈಗೊಂಡು ಈ ಭಾಗದ ಜನತೆಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.
ವಿಧಾನಪರಿಷತ್ತು: ಮಹದಾಯಿ ಯೋಜನೆ ಯಡಿ ಅಕ್ಟೋಬರ್ 2017ರವರೆಗೆ ಒಟ್ಟು 249.45 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಜೆಡಿಎಸ್‌ನ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ನೀಡಿರುವ ಲಿಖೀತ ಉತ್ತರದಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ಮಹದಾಯಿ ಯೋಜನೆಯು ಪ್ರಸ್ತುತ ನ್ಯಾಯಾಧಿಕರಣದ ಮುಂದಿದೆ. ಈ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ಸರ್ಕಾರದಿಂದ ಮಾಡಲಾಗುತ್ತಿದೆ. ನ್ಯಾಯಾಧಿಕರಣದ
ಮುಂದೆ ವಾದ ಮಂಡಿಸಲು ನುರಿತ ಕಾನೂನು ತಂಡ ನೇಮಿಸಲಾಗಿದೆ. ಈ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಗೋವಾ ಮತ್ತು ಮಹಾರಾಷ್ಟ್ರ ಸಿಎಂಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಮಹದಾಯಿ ವಿವಾದ ಬಗೆಹರಿಸುವ ಕುರಿತು ಈಗಾಗಲೇ ಗೋವಾ ಸರ್ಕಾರದೊಂದಿಗೆ ಮಾತುಕತೆ ಪ್ರಯತ್ನ ಆರಂಭವಾಗಿದ್ದು, ಒಂದು ತಿಂಗಳಲ್ಲಿ ಸಿಹಿ ಸುದ್ದಿ ಸಿಗಲಿದೆ.
●ಜಗದೀಶ್ ಶೆಟ್ಟರ್, ವಿಧಾನಸಭೆ ಪ್ರತಿಪಕ್ಷ