Advertisement
ಬೊಪ್ಪನಹಳ್ಳಿ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ತಾಲೂಕಿನ ಮುಖಂಡರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಮಾತನಾಡಿದ ಶಾಸಕರು, ಈ ಹಿಂದೆ ಜಾತಿಪದ್ಧತಿ ರೂಢಿಯಲ್ಲಿತ್ತು. ಆದರೆ, ಈಗ ಕಾಲ ಬದಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪೃಶ್ಯತೆ ಆಚರಿಸುವುದು ಕಾನೂನು ಬಾಹಿರ. ಅಸ್ಪೃಶ್ಯತೆ ಆಚರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮಗಳು ಇವೆ ಎಂದು ಎಚ್ಚರಿಕೆ ನೀಡಿದರು.
Related Articles
Advertisement
ವಿವಾದ ಪರಿಹರಿಸಿಕೊಳ್ಳಲು ಸಮ್ಮತಿ: ಶಾಸಕರು, ಮುಖಂಡರು ಮತ್ತು ಅಧಿಕಾರಿಗಳ ಸಲಹೆ ಮೇರೆಗೆ ಗ್ರಾಮಸ್ಥರು, ಪರಸ್ಪರ ಒಮ್ಮತದಿಂದ ಮಾರಮ್ಮ ಹಬ್ಬ ಆಚರಿಸುವುವುದಾಗಿ ತಿಳಿಸಿದರು. ಜೊತೆಗೆ ಗುಂಡುತೋಪು ಜಾಗ ಹಂಚಿಕೆ ಮಾಡಿಕೊಂಡು ಗ್ರಾಮದಲ್ಲಿ ಸ್ಥಗಿತಗೊಂಡಿದ್ದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಬದ್ಧªರಾಗುವುದಾಗಿ ಸಮ್ಮತಿ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಆರ್.ಮಂಜುನಾಥ್, ತಾಲೂಕು ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸೋಗಳ್ಳಿ ಶಿವಣ್ಣ, ತಾಲೂಕು ಒಕ್ಕಲಿಗ ಸಂಘದ ನರಸಿಂಹೇಗೌಡ, ಜಿಲ್ಲಾ ಪಂಚಾಯಿತಿ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟಸ್ವಾಮಿ, ರಾಜೇಂದ್ರ, ಚಿಕ್ಕವೀರನಾಯ್ಕ, ಸೋಮೇಶ, ಸಬ್‌ಇನ್ಸ್‌ಪೆಕ್ಟರ್ ಎಂ.ನಾಯಕ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
ಶಾಂತಿ ಸಭೆ ನಡೆಸಿ, ಸೌಹಾರ್ದತೆ ಮೂಡಿಸಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಶಾಂತಿ, ವೈಷಮ್ಯ ಭುಗಿಲೆದಿದ್ದರೂ ತಾಲೂಕು ಆಡಳಿತ ಗ್ರಾಮಗಳಲ್ಲಿ ಶಾಂತಿಸಭೆ ನಡೆಸಿ ಶಾಂತಿ ನೆಲೆಸುವಂತೆ ಮಾಡಲು ವಿಪಲವಾಗಿದೆ ಎಂದು ಅಧಿಕಾರಿಗಳನ್ನು ಮಾಜಿ ಶಾಸಕ ಚಿಕ್ಕಣ್ಣ ತರಾಟಗೆ ತೆಗೆದುಕೊಂಡರು. ತಾಲೂಕಿನ ಸಾಗರೆ, ಹೆಬ್ಬಲಗುಪ್ಪೆ, ಕಟ್ಟೆಮನುಗನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ.
ಹಬ್ಬ, ಜಾತ್ರೆ ಮತ್ತಿತರ ವಿಚಾರವಾಗಿ ಸಮುದಾಯಗಳ ನಡುವೆ ದ್ವೇಷ ಭಾವನೆ ಬೆಳೆಯುತ್ತಿದೆ. ಕೂಲಿ ಕೆಲಸಗಳಿಗೆ ಕಾರ್ಮಿಕರ ಬಾರದಂತಾಗಿದೆ. ಪರಸ್ಪರ ಸಹಕಾರ ಮನೋಭಾವನೆ ಇಲ್ಲದಂತಾಗಿದೆ. ಗ್ರಾಮಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಇದನ್ನು ಉಲ್ಲಂ ಸಿದವರಿಗೆ ಮೌಖೀಕವಾಗಿ ದಂಡ ವಿಧಿಸುವಂತೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಆದರೂ ತಾಲೂಕು ಆಡಳಿತ ಗ್ರಾಮಗಳಲ್ಲಿ ಶಾಂತಿ ಸಭೆ ನಡೆಸಿಲ್ಲ. ಅಧಿಕಾರಿಗಳು ಬೇಜವಾಬ್ದಾರಿ ಧೋರಣೆ ತೋರುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.