Advertisement

ಕೋವಿಡ್‌ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡಿ

10:41 AM Oct 16, 2021 | Team Udayavani |

ಬೀದರ: ಕೋವಿಡ್‌-19 ಸೋಂಕಿನಿಂದಾಗಿ ಯಾರಾದರು ಮರಣ ಹೊಂದಿದವರಿದ್ದರೆ ಅವರ ಕುಟುಂಬದವರಿಗೆ ಸರ್ಕಾರದಿಂದ ನಿಯಮಾನುಸಾರ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್‌ ವಿನ್ಸೇಂಟ್‌ ಡಿಸೋಜಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಜಿಲ್ಲೆಯಲ್ಲಿ ಕೋವಿಡ್‌-19 ಲಸಿಕಾಕರಣ ಪ್ರಗತಿಯು ನಿಗದಿಪಡಿಸಿದ ಗುರಿಯನುಸಾರ ನಡೆಯಬೇಕು. ಅತಿ ಹೆಚ್ಚು ಲಸಿಕೆ ನೀಡಿದ ಕೇಂದ್ರಗಳೆಷ್ಟು? ಅತೀ ಕಡಿಮೆ ಲಸಿಕೆ ನೀಡಿದ ಕೇಂದ್ರಗಳೆಷ್ಟು? ಎಂಬುದನ್ನು ಗುರುತಿಸಿ, ಪರಿಶೀಲಿಸಿ, ಕೊರತೆ ಇರುವ ಕಡೆಗಳಲ್ಲಿ ಲಸಿಕಾರಣದ ಪ್ರಗತಿಗೆ ಮೊದಲ ಆದ್ಯತೆ ನೀಡಬೇಕು ಎಂದರು.

ಅಗತ್ಯವಿದ್ದರೆ ಜಿಲ್ಲೆಯಲ್ಲಿ ಕೋವಿಡ್‌-19 ಲಸಿಕಾ ಬೂತ್‌ಗಳ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ವಹಿಸಬೇಕು. ನಿಗದಿಪಡಿಸಿದ ಗುರಿಯನುಸಾರ ಲಸಿಕಾಕರಣಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌ ಇದೇ ವೇಳೆ ತಿಳಿಸಿದರು.

ಸಭೆಯಲ್ಲಿ ಡಿಎಚ್‌ಒ ಡಾ| ವಿ.ಜಿ ರೆಡ್ಡಿ ಮಾತನಾಡಿ, ಕೋವಿಡ್‌ನಿಂದ ಮೃತರಾದವರ ಕುಟುಂಬದವರು, ಸಂಬಂಧಿಕರು ಸರ್ಕಾರದಿಂದ ಪರಿಹಾರ ಪಡೆಯುವುದಕ್ಕೆ ಸಂಬಂಧಿಸಿದಂತೆ ಲಿಂಕ್‌ ಬಳಸಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಇದುವರೆಗೆ 8,83,463 ಜನರು ಮೊದಲ ಡೋಸ್‌ನ್ನು 4,33,005 ಜನರು ಎರಡನೇ ಡೋಸನ್ನು ಪಡೆದು ಕೊಂಡಿದ್ದಾರೆ. ಇನ್ನೂ 3 ಲಕ್ಷ ಜನರಿಗೆ ಮೊದಲನೇ ಡೋಸ್‌ ನೀಡುವುದು ಬಾಕಿ ಇದೆ. ಈಗ ಮೊದಲನೇ ಹಾಗೂ ಎರಡನೇ ಡೋಸ್‌ ಸೇರಿ ಪ್ರತಿ ದಿನ 11 ಜನರಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕಾಕರಣಕ್ಕೆ ವಿವಿಧ ಇಲಾಖೆಗಳಿಂದ ಸಹಕಾರ ಸಿಗುತ್ತಿದೆ. ಜನರ ಮನವೊಲಿಸಿ ಲಸಿಕಾಕರಣ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Advertisement

ಇದನ್ನೂ ಓದಿ: ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

ತೋಟಗಾರಿಕಾ ಬೆಳೆಗಳ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದಾಗಿ 1203 ಹೆಕ್ಟೇರ್‌ ಪ್ರದೇಶದಲ್ಲಿನ ಶುಂಠಿ, ಟೆಮೆಟೋ, ಮೆನಸಿನಕಾಯಿ ಹಾಗೂ ಇನ್ನಿತರ ತೋಟಗಾರಿಕಾ ಬೆಳೆಗಳು ಹಾನಿಯಾಗಿದೆ. ಇದಕ್ಕಾಗಿ ಪರಿಹಾರ ಮೊತ್ತ 1.7 ಕೋಟಿ ರೂ. ಅಂದಾಜಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ತಿಳಿಸಿದರು.

ಸರ್ಕಾರದಿಂದ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಕೂಡಲೇ ಬಳಕೆ ಮಾಡಬೇಕು. ನಿವೇಶನ ಲಭ್ಯವಿರುವ ಕಡೆಗಳಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯವನ್ನು ವಿಳಂಬ ಮಾಡದೇ ಆರಂಭಿಸಬೇಕು ಎಂದು ಡಿಡಿಪಿಯ ಮತ್ತು ಪಿಆರ್‌ಇ ಇಲಾಖೆ ಅಧಿಕಾರಿಗಳಿಗೆ ಸಭೆಯಲ್ಲಿ ಕಾರ್ಯದರ್ಶಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಹಲವಾರು ಬಾರಿ ನಡೆದ ಸಭೆಗಳಲ್ಲಿ ತಿಳಿಸಿದಾಗ್ಯೂ ಕಚೇರಿಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕಿಸಲು ಕ್ರಮ ವಹಿಸದೇ ಇರುವ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಕಾರಣ ಕೇಳಿ ನೋಟೀಸ್‌ ಜಾರಿ ಮಾಡಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಜಿಪಂ ಸಿಇಒ ಜಹೀರಾ ನಸೀಮ್‌, ಅಪರ ಜಿಲ್ಲಾಧಿಕಾರಿ ಬಿ. ಬಾಬು ರೆಡ್ಡಿ, ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಡಾ| ಭುವನೇಶ ಪಾಟೀಲ, ಜಿಪಂ ಸಿಇಒ ಎಸ್.ಎಸ್ ಮಠಪತಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next