Advertisement

ಮಹಾಲಿಂಗೇಶ್ವರ ದೇವಾಲಯದಲ್ಲಿ  ಧಾರ್ಮಿಕ ಕಾರ್ಯಕ್ರಮ

07:34 AM Mar 22, 2019 | Team Udayavani |

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವರ್ಣ ಕವಚದ ನೂತನ ಧ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ನಡೆದವು.

Advertisement

ಬೆಳಗ್ಗೆ ಗಣಪತಿ ಹೋಮ, ತ್ರಿಕಾಲ ಪೂಜೆ, ಸಂಹಾರತತ್ವ ಹೋಮ, ತತ್ವಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಶಯ್ನಾ ಪೂಜೆ, ಅಧಿವಾಸ ಹೋಮದ ಅಗ್ನಿಜನನ, ತತ್ವಕಲಶಾಭಿಷೇಕ, ಜೀವ  ಕಲಶ ಪೂಜೆ, ಜೀವೋದ್ವಾಸನೆ, ಜೀವ ಕಲಶ, ಶಯ್ಯೋನಯನ, ಮಧ್ಯಾಹ್ನ ಅಂಕುರ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಧಾನ್ಯಾಧಿವಾಸ, ಅಧಿವಾಸ ಹೋಮ, ಶಿರಸ್ತತ್ವ ಹೋಮ, ಪ್ರತಿಷ್ಠಾ ಹೋಮ, ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತುಬಲಿ, ವಾಸ್ತು ಪುಣ್ಯಹಾಂತ, ಬ್ರಹ್ಮಕಲಶ ಮಹಾಪೂಜೆ ನಡೆದವು. ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯರು, ಭಕ್ತರು ಪಾಲ್ಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next