Advertisement

ಆರು ವರ್ಷದ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರ, ಆರೋಪಿ ಬಂಧನ

03:22 PM Jul 28, 2022 | Team Udayavani |

ಲಕ್ನೋ: ಆರು ವರ್ಷದ ಬಾಲಕಿ ಮೇಲೆ ಧಾರ್ಮಿಕ ಮೌಲ್ವಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಸಂಭಾಲ್ ನಲ್ಲಿ ನಡೆದಿರುವುದಾಗಿ ಪೊಲೀಸರು ಬುಧವಾರ(ಜುಲೈ 28) ತಿಳಿಸಿದ್ದಾರೆ.

Advertisement

ಸಂತ್ರಸ್ತೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಮಂಗಳವಾರ ಮಸೀದಿಯ ಮೌಲ್ವಿ ಓವೈಸ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ.

ಆರೋಪಿ ಓವೈಸ್ ಬಾಲಕಿಯನ್ನು ಮಸೀದಿ ಸಮೀಪದ ತನ್ನ ಕೋಣೆಯೊಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) 376ರ ಅಡಿ ಎಫ್ ಐಆರ್ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next