Advertisement

ಆಡಳಿತಾತ್ಮಕ ಹಿತದೃಷ್ಟಿಯಿಂದ ಹೇಮಾವತಿ ಎಡದಂಡೆ ನಾಲಾ ವಿಭಾಗ ಕಚೇರಿಗಳ ಸ್ಥಳಾಂತರ

04:25 PM Oct 08, 2021 | Team Udayavani |

ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಕೆಆರ್ ಪೇಟೆ ಹಾಗೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾವೇರಿ ನೀರಾವರಿ ನಿಗಮ ಹಾಗೂ ಹೇಮಾವತಿ ಎಡದಂಡೆ ನಾಲೆಗಳ ಕಚೇರಿಗಳನ್ನು ಸ್ಥಳಾಂತರ ಮಾಡಲು ಸರ್ಕಾರ ಅನುಮೋದನೆ ನೀಡಿದೆ.

Advertisement

ಹಾಸನ ಜಿಲ್ಲೆ ಶ್ರವಣಬೆಳಗೊಳ ತಾಲ್ಲೂಕು ವ್ಯಾಪ್ತಿಯ ದೊಡ್ಡಕಾಡನೂರು ಹಾಗೂ ಶ್ರವಣಬೆಳಗೊಳದಲ್ಲಿರುವ ಹೇಮಾವತಿ ನಾಲಾ ವಿಭಾಗದದಲ್ಲಿ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದ ಭಾಗವನ್ನು ಮಂಡ್ಯ ಜಿಲ್ಲೆ ಕೆಆರ್ ಪೇಟೆ ಹೇಮಾವತಿ ಎಡದಂಡೆ ನಾಲಾ ವಿಭಾಗಕ್ಕೆ ಸ್ಥಳಾಂತರಿಸಿ ಸರ್ಕಾರ ಆದೇಶ ಹೊರಡಿಸಿದೆ‌.

ಅದೇ ರೀತಿ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲ್ಲೂಕು ವ್ಯಾಪ್ತಿಯ ಕಿಕ್ಕೇರಿಯಲ್ಲಿರುವ ಹೇಮಾವತಿ ನಾಲಾ ಉಪ ವಿಭಾಗದ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಭಾಗವನ್ನು ಆ ಭಾಗದ ಮುಖ್ಯನಾಲೆ, ವಿತರಣಾ ನಾಲೆಗಳು ಮತ್ತು ಕೆರೆಗಳ ಸಮೇತ ನಂ ೩ ಹೇಮಾವತಿ ಎಡದಂಡೆ ನಾಲಾ ವಿಭಾಗ ಚನ್ನರಾಯಪಟ್ಟಣ ವ್ಯಾಪ್ತಿಗೆ ಸ್ಥಳಾಂತರಿಸಲು ಸರ್ಕಾರ ಅನುಮೋದನೆ ಕೊಟ್ಟಿದೆ.

ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟ ಉಪ ವಿಭಾಗದ ಭಾಗಗಳನ್ನು ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಿಭಾಗ ಕಚೇರಿಗಳಿಗೆ ಸ್ಥಳಾಂತರ ಮಾಡುವುದರಿಂದ ಆಡಳಿತಾತ್ಮಕ ಹಾಗೂ ಆ ಭಾಗದ ಜನರಿಗೂ ಅನುಕೂಲ ಆಗಲಿ್ರದೆ. ಆ ಕಾರಣಕ್ಕಾಗಿ ಉಪ ವಿಭಾಗದ ಕಚೇರಿಗಳನ್ನ ಸ್ಥಳಾಂತರಿಸಲು ಸರ್ಕಾರ ಒಪ್ಪಿಗೆ ಸೂಚಿಸಿ, ಆದೇಶ ಹೊರಡಿಸಿದೆ.

ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ. ಈ ಭಾಗದ ಜನರಿಗೆ ಆಗುತ್ತಿದ್ದ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಚೇರಿಗಳ ಸ್ಥಳಾಂತರದಿಂದ ಈ ಭಾಗದ ಜನರು ಅನಗತ್ಯ ಅಲೆದಾಡುವುದು ತಪ್ಪಲಿದೆ ಎಂದು ಸಚಿವ ನಾರಾಯಣಗೌಡ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next