Advertisement
ಪಾದರಾಯನಪುರದ ದಾಳಿಕೋರರ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ, ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ಗೆ ನಿರ್ದೇಶಿಸುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್.ಓಕಾ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಅವರು ಲಿಖೀತ ಹೇಳಿಕೆ ಸಲ್ಲಿಸಿ ಈ ಮಾಹಿತಿ ನೀಡಿದರು.ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳ ಪೈಕಿ ಐವರಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ಇದರಿಂದ 121 ಆರೋಪಿಗಳನ್ನು ಕ್ವಾರಂಟೈನ್ ಮಾಡಲಾಯಿತು. ಬೆಂಗಳೂರಿನ ಜೈಲಿನಲ್ಲಿ4,526 ಕೈದಿಗಳನ್ನಿಡಬಹುದು. ಆದರೆ ಈಗಾಗಲೇ ಜೈಲಿನಲ್ಲಿ 4,914 ಕೈದಿಗಳನ್ನು ಇರಿಸಲಾಗಿದೆ. ಹೀಗಾಗಿ, ಪಾದರಾಯನಪುರದ ಆರೋಪಿಗಳನ್ನು ರಾಮನಗರ ಜೈಲಿನಲ್ಲಿ
ಕ್ವಾರಂಟೈನ್‌ನಲ್ಲಿಡಲಾಗಿತ್ತು ಎಂದು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು. ಈ ಹೇಳಿಕೆ ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿದೆ.