Advertisement
ಈ ಕುರಿತು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೋಮವಾರ ಸಂಜೆ ಪತ್ರಿಕೆಗೆ ಮಾಹಿತಿ ನೀಡಿದ್ದು, ಈ ಪ್ರಕರಣದಲ್ಲಿ ಜಿಲ್ಲಾ ಆಸ್ಪತ್ರೆಯ ಮೂವರು ಸಿಬ್ಬಂದಿ ಹಾಗೂ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ 8 ಜನ ವ್ಯಕ್ತಿಗಳು ಕೂಡಿಕೊಂಡು, ಒಂದು ರೆಮ್‌ಡಿಸ್ವಿಯರ್ ಚುಚ್ಚು ಮದ್ದನ್ನು 18ರಿಂದ 25 ಸಾವಿರಕ್ಕೆ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ಈ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿಯೇ ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಹಿಡಿಯಲಾಗಿದೆ ಎಂದು ತಿಳಿಸಿದರು.
Related Articles
Advertisement
ಇದನ್ನೂ ಓದಿ : ಸೋಂಕಿತರ ಚಿಕಿತ್ಸೆಗೆ ಬಳಸಿದ ರೆಮ್ ಡೆಸಿವಿರ್ ಮಾರಾಟ ಮಾಡಲು ಯತ್ನ: ಮೂವರು ಅಂದರ್
ಈ ದಾಳಿಯಲ್ಲಿ ಬಾಗಲಕೋಟೆ ಶಹರ ಠಾಣೆಯ ಪಿಐ ವಿಜಯ ಮುರಗುಂಡಿ, ಸಿಇಎನ್ ಕ್ರೈ ಠಾಣೆಯ ಪಿಐ ಮಲ್ಲಯ್ಯ ಮಠಪತಿ, ಪಿಎಸ್‌ಐ ಮಣಿಕಂಠ ಪೂಜಾರಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಗಳ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಾಳಿ ನಡೆಸಿದ ಪೊಲೀಸ್ ಅಽಕಾರಿ-ಸಿಬ್ಬಂದಿಗೆ ನಗದು ಬಹುಮಾನ ಘೋಷಿಸಲಾಗಿದೆ ಎಂದು ಎಸ್ಪಿ ಲೋಕೇಶ ತಿಳಿಸಿದರು.
ಜಿಲ್ಲೆಯಲ್ಲಿ ರೆಮ್‌ಡಿಸ್ವಿಯರ್ ಕೊರತೆ ಇದೆ ಎಂಬ ವದಂತಿ ಹಬ್ಬಿಸಿ, ಅದನ್ನು ಬ್ಲಾಕ್ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ ಮಾಡಲಾಗಿದೆ. ಇದು ನಗರಕ್ಕೆ ಸಂಬಂಧಿಸಿದ್ದಾಗಿದ್ದು, 11 ಜನರನ್ನು ಬಂಧಿಸಲಾಗಿದೆ. ಮೂವರು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು, ಏಳು ಜನ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯಾಗಿದ್ದಾರೆ. ಇವರೆಲ್ಲ 18ರಿಂದ 25 ಸಾವಿರಕ್ಕೆ ರೆಮ್‌ಡಿಸ್ವಿಯರ್ ಮಾರುತ್ತಿದ್ದ ವೇಳೆ ಸಿಕ್ಕು ಬಿದ್ದಿದ್ದಾರೆ. ಜಿಲ್ಲಾ ಆಸ್ಪತ್ರೆಯಿಂದ ಕಳ್ಳ ಸಾಗಣೆ ಮಾಡಿ, ರೋಗಿಗಳಿಗೆ ಬಳಸುತ್ತಿದ್ದ ಖಾಸಗಿ ಆಸ್ಪತ್ರೆ ವೈದ್ಯರ ಕುರಿತೂ ತನಿಖೆ ನಡೆಸಲಾಗುತ್ತಿದೆ. ಇಂತಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಠೀಣ ಕ್ರಮ ಕೈಗೊಳ್ಳಲಾಗುವುದು.–ಲೋಕೇಶ ಜಗಲಾಸರ, ಎಸ್ಪಿ