Advertisement
ಮೂರು ತಿಂಗಳಿಂದ ಮಳೆ ಸುರಿಯುತ್ತಿದ್ದು, ಕೆರೆಗಳು ತುಂಬಿವೆ. ಬರ ಪೀಡಿತ ಪ್ರದೇಶಗಳಲ್ಲೂ ಕೆರೆಗಳು ತುಂಬಿರುವುದು ದಾಖಲೆ. ಆಗಸ್ಟ್ ನಲ್ಲಿ ಶೇ. 144ರಷ್ಟು ಹೆಚ್ಚು ಮಳೆಯಾಗಿದೆ. ಈ ತಿಂಗಳ ಮೊದಲ ವಾರದಲ್ಲೇ ಶೇ. 51ರಷ್ಟು ಹೆಚ್ಚು ಮಳೆಯಾಗಿದೆ. ಅತಿಯಾದ ಮಳೆಯಲ್ಲಿ ಬೆಳೆ ಕೊಳೆತು ರೈತನಿಗೆ ಸಂಕಷ್ಟ ತಂದೊಡ್ಡಿದೆ. ಬಿತ್ತಿದ ಬೆಳೆ ಕೈಗೆ ಸಿಗದೇ ನಷ್ಟವಾಗಿರುವುದು ಒಂದೆಡೆಯಾದರೆ, ಸೂಕ್ತ ಪರಿಹಾರವೂ ಸಿಗದಿರುವುದು ಇನ್ನೊಂದೆಡೆ. ಇದರೊಂದಿಗೆ ಅಪಾರ ಬೆಳೆ ನಷ್ಟ ವಾಗಿರುವುದರಿಂದ ಆಹಾರ ಉತ್ಪಾದನೆ ಮೇಲೂ ಪರಿಣಾಮ ಬೀರಲಿದೆ.ರಾಜ್ಯ ಸರಕಾರದ ಅಂಕಿ-ಅಂಶಗಳ ಪ್ರಕಾರವೇ 5.39 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕೆ, 60 ಸಾವಿರ ಹೆಕ್ಟೇರ್ ವಾಣಿಜ್ಯ ಬೆಳೆ ಮಳೆ ಹಾಗೂ ನೆರೆಗೆ ಕೊಚ್ಚಿ ಹೋಗಿದೆ.
ರಾಜ್ಯ ಸರಕಾರವು ಕೇಂದ್ರ ಸರಕಾರದ ಮಾರ್ಗ ಸೂಚಿ ದರದ ಜತೆಗೆ ಹೆಚ್ಚುವರಿಯಾಗಿ ಪರಿಹಾರ ಕೊಡುತ್ತಿದ್ದೇವೆ ಎಂದಿದ್ದರೂ ಸಮ ರ್ಪಕವಾಗಿ ವಿತರಣೆಯಾಗಿಲ್ಲ ಎಂಬುದು “ಉದಯವಾಣಿ’ ರಿಯಾಲಿಟಿ ಚೆಕ್‌ನಲ್ಲಿ ಕಂಡು ಬಂದಿದೆ. ಮಳೆಯಿಂದ ಹಾನಿಗೊಳಗಾದ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ತುಮಕೂರು, ಬೆಳಗಾವಿ, ಗದಗ, ಕಲಬುರಗಿ, ಬೀದರ್ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಹಾಗೂ ಶಾಸಕರು ಪರಿಹಾರದ ಬಗ್ಗೆ ಹೆಚ್ಚು ಗಮನವನ್ನೇ ಕೊಟ್ಟಿಲ್ಲ. ಜಿಲ್ಲಾಧಿಕಾರಿಗಳು ಕೃಷಿ ಮತ್ತು¤ ತೋಟಗಾರಿಕೆ ಅಧಿಕಾರಿಗಳ ನೆರವಿನಿಂದ ಪ್ರತೀ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ರೈತರಿಗೆ ಪರಿಹಾರ ಸಿಕ್ಕಿಲ್ಲ. ಅಷ್ಟೇ ಅಲ್ಲ, ಮಳೆಯಿಂದ ಮನೆ ಕಳೆದು ಕೊಂಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Related Articles
Advertisement
ಹಾಸನ, ದಾವಣಗೆರೆ, ಯಾದಗಿರಿ ಜಿಲ್ಲೆಯಲ್ಲಿ ಪರಿಹಾರಕ್ಕೆ ಇನ್ನೂ ಅಂತಿಮ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಚಿಕ್ಕಮಗಳೂರಿನಲ್ಲಿ ಶೇ. 90ರಷ್ಟು ಪರಿಹಾರ ವಿತರಣೆಯಾಗಿದೆ. ಕೊಪ್ಪಳ ದಲ್ಲಿ ಪರಿಹಾರ ವಿತರಣೆ ಪ್ರಗತಿಯಲ್ಲಿದೆ.
6 ಸಾವಿರ ಕೋಟಿ ರೂ. ನಷ್ಟ?ರಾಜ್ಯ ಸರಕಾರವು ಪ್ರಾಥಮಿಕವಾಗಿ ಅಂದಾಜು ಮಾಡಿರುವ ಪ್ರಕಾರ ಬೆಳೆ ನಷ್ಟದ ಪ್ರಮಾಣವೇ 3,056 ಕೋಟಿ ರೂ. ಎಂದು ಹೇಳಿದ್ದರೂ 5-6 ಸಾವಿರ ಕೋಟಿ ರೂ. ತಲುಪುವ ಸಾಧ್ಯತೆ ಇದೆ. ರಾಜ್ಯ ಸರಕಾರವು ಕೇಂದ್ರ ಸರಕಾರದಿಂದ ಎನ್‌ಡಿಆರ್‌ಎಫ್ ಮಾರ್ಗಸೂಚಿಯಡಿ 1,200 ಕೋಟಿ ರೂ. ನೆರವಿಗಾಗಿ ಪ್ರಸ್ತಾವ ಸಲ್ಲಿಸಿದೆ. ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿ ಕಾರಿಗಳ ಜತೆ ಸಭೆ ನಡೆಸಿದ್ದರು. ಬೆಳೆ ನಷ್ಟ, ಮೂಲಸೌಕರ್ಯ ಹಾನಿ ಸೇರಿ 11 ಸಾವಿರ ಕೋಟಿ ರೂ.ವರೆಗೆ ಹಾನಿಯಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದೇವೆ ಎಂದಿದ್ದರು. ಮಳೆ ಹಾನಿಯ ಸಮೀಕ್ಷೆಗಾಗಿ ರಾಜ್ಯಕ್ಕೆ ಬಂದಿದ್ದ ಅಧಿಕಾರಿಗಳ ತಂಡಕ್ಕೂ ಹಾನಿ ಹಾಗೂ ನಷ್ಟದ ಬಗ್ಗೆ ಸಮಗ್ರ ವರದಿ ನೀಡಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚು ಅನುದಾನ ಬಿಡುಗಡೆಗೆ ಶಿಫಾರಸು ಮಾಡುವಂತೆ ಕೋರಿದ್ದರು. ಆದರೆ ಕಳೆದ ಐದು ವರ್ಷಗಳ ಅಂಕಿ-ಅಂಶ ಗಮನಿಸಿದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವನೆಯ ಪೈಕಿ ಶೇ.50 ರಷ್ಟೂ ಬಂದಿಲ್ಲ. ಕೆಲವು ವರ್ಷ ಶೇ.50 ಕ್ಕಿಂತ ಕಡಿಮೆ ಬಂದಿದ್ದೂ ಇದೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿ ಅದು ರೈತನ ಖಾತೆಗೆ ತಲುಪುವಷ್ಟರಲ್ಲಿ ಸಾಲ ಮಾಡಿ ಬೆಳೆ ಹಾಕಿದ ರೈತನ ಆರ್ಥಿಕ ಸ್ಥಿತಿ ಚಿಂತಾಜನಕವಾಗುತ್ತಿದೆ. ರಾಜಕಾಲುವೆ ತೆರವು ನಿರಂತರ ಪ್ರಕ್ರಿಯೆ
ಬೆಂಗಳೂರು: ರಾಜ ಕಾಲುವೆ ತೆರವು ಕಾರ್ಯ ನಿರಂತರವಾಗಿ ನಡೆಸ ಲಾಗು ತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಗರದ ಎಲ್ಲೆಡೆ ಈ ಸಮಸ್ಯೆ ಇಲ್ಲ. ಮಹದೇವಪುರ ಭಾಗದಲ್ಲಿ ಹೆಚ್ಚಿನ ಸಮಸ್ಯೆಯಾಗಿದೆ ಎಂದರು. ರಾಜಕಾಲುವೆ ನಿರ್ಮಾಣದ ಬಾಕಿ ಇರುವ 300 ಕಿ.ಮೀ. ಯೋಜನೆಯನ್ನೂ ಶೀಘ್ರವೇ ಕೈಗೆತ್ತಿಕೊಳ್ಳಲು ಸೂಚಿಸಲಾಗುವುದು ಎಂದರು. ಇದೇ ವೇಳೆ, ರಾಜ್ಯ ಸರಕಾರ ಪ್ರವಾಹ ಪರಿಸ್ಥಿತಿ ಎದುರಿಸಲು ಮುಂಜಾಗ್ರತಾಕ್ರಮ ಕೈಗೊಳ್ಳದ ಕಾರಣ ಜನತೆ ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿಯೇ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾ ಮಯ್ಯ ಆರೋಪಿಸಿದರು. ರಾಜ್ಯ ಸರಕಾರವು ಬೆಂಗಳೂರು ಸೇರಿದಂತೆ ರಾಜ್ಯಾ ದ್ಯಂತ ನೆರೆ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.