Advertisement
ಇನ್ನು, ಪುನೀತ್ ರಾಜ್‌ಕುಮಾರ್ ಕುಟುಂಬ ಶನಿವಾರ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿತು. ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್‌ರಾಜ್‌ಕುಮಾರ್, ಪುತ್ರಿ ವಂದಿತಾ, ವಿನಯ್, ಯುವ, ಧೀರೇನ್ ಹಾಗೂ ಶಿವಣ್ಣ ಸಹೋದರಿಯರು ಸೇರಿ ಸಮಾಧಿಗೆ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುತ್ತಿದ್ದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭಾವುಕರಾಗಿ ಅತ್ತರು. ಈ ದೃಶ್ಯನೆರದಿದ್ದವರ ಕಣ್ಣಂಚಲ್ಲೂ ನೀರು ತರಿಸಿತು.
Related Articles
Advertisement
ಕನ್ನಡದಲ್ಲಿ ಕೇಜ್ರಿವಾಲ್ ಟ್ವೀಟ್: ಪುನೀತ್ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಪುನೀತ್ ಅವರನ್ನು ಸ್ಮರಿಸಿಕೊಂಡಿದ್ದಾರೆ. ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್, ಕೂಡ ಅಪ್ಪುವನ್ನು ನೆನಪು ಮಾಡಿಕೊಂಡಿದ್ದು, ಕನ್ನಡದಲ್ಲಿಯೇ ಟ್ವೀಟ್ ಮಾಡಿ ಗಮನಸೆಳೆದರು. “ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನಗಳು’ ಎಂದು ಬರೆದುಕೊಂಡಿರುವ ಕೇಜ್ರಿವಾಲ್, “ಡಾ. ಪುನೀತ್ ರಾಜಕುಮಾರ್ ಅವರ ಪುಣ್ಯತಿಥಿಯಾಗಿರುವ ಇಂದು ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರು ನಟಿಸಿರುವ ಸಿನಿಮಾ, ಹಾಡುಗಳು ಮತ್ತು ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಬಿಟ್ಟು ಹೋಗಿಲ್ಲ ಎಂದು ಅನಿಸುತ್ತದೆ. ಅವರು ಯಾವತ್ತೂ ಪವರ್ ಸ್ಟಾರ್ ಆಗಿಯೇ ಇರುತ್ತಾರೆ’ ಎಂದು ಪುನೀತ್ ಗುಣಗಾನ ಮಾಡಿದ್ದಾರೆ.
ಇದನ್ನೂ ಓದಿ:ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ : ತಡೆಗೆ ಅಗತ್ಯ ಕ್ರಮ
ಅಶ್ವಿನಿ ಭಾವುಕ ಪತ್ರ: ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ. “ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು’ ಎಂದು ಬರೆದಿರುವ ಅಶ್ವಿನಿ ಪುನೀತ್ ರಾಜಕುಮಾರ್ ತಮ್ಮ ಪತ್ರವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
ರೇಷ್ಮೆ ಸೀರೆಯಲ್ಲಿ ಅರಳಿದ ಪುನೀತ್
ಪುನೀತ್ ರಾಜಕುಮಾರ್ ಸ್ಮರಣಾರ್ಥ ಅಭಿಮಾನಿಗಳು ವಿಶೇಷ ರೀತಿಯಲ್ಲಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಮರ್ಪಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದ ಸೀರೆ ತಯಾರಕರೊಬ್ಬರು ಪುನೀತ್ ರಾಜಕುಮಾರ್ ಭಾವಚಿತ್ರವನ್ನು ರೇಷ್ಮೆ ಸೀರೆಯಲ್ಲಿ ಅರಳಿಸಿ ಅಭಿಮಾನ ಮೆರೆದಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಉಡುಗೊರೆಯಾಗಿ ನೀಡಲು ಈ ವಿಶೇಷ ಸೀರೆಯನ್ನು ತರಲಾಗಿತ್ತು. ಆದರೆ ಕಂಠೀರವ ಸ್ಟುಡಿಯೋದಲ್ಲಿ ಜನ ಜಂಗುಳಿ ಹೆಚ್ಚಾದ ಕಾರಣ, ಕೊನೆ ಕ್ಷಣದಲ್ಲಿ ಅಶ್ವಿನಿ ಅವರ ಭೇಟಿ ಸಾಧ್ಯವಾಗಲಿಲ್ಲ. ಹಾಗಾಗಿ, ಕೊನೆಗೆ ಅಭಿಮಾನಿಗಳು ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿ ರಾಘವೇಂದ್ರ ರಾಜಕುಮಾರ್ ಅವರಿಗೆ ಈ ಸೀರೆಯನ್ನು ಸಮರ್ಪಿಸಿದರು. ಅಭಿಮಾನಿಗಳು ತಂದಿದ್ದ ರೇಷ್ಮೆ ಸೀರೆಯನ್ನು ಸ್ವೀಕರಿಸಿದ ರಾಘವೇಂದ್ರ ರಾಜಕುಮಾರ್, ವಿಭಿನ್ನ ರೀತಿಯಲ್ಲಿ ಅಭಿಮಾನದ ಮೆರೆದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು