Advertisement

ಬ್ಯಾಂಕಿಂಗ್‌ ನೇಮಕಾತಿ ನಿಯಮ ಸಡಿಲಿಸಿ: ಪರಂ

12:50 AM Aug 15, 2018 | |

ಬೆಂಗಳೂರು: ಬ್ಯಾಂಕಿಂಗ್‌ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲು ಐಬಿಪಿಎಸ್‌ ನಿಯಮಗಳನ್ನು ಸಡಿಲಗೊಳಿಸುವಂತೆ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಪತ್ರ ಬರೆದಿದ್ದಾರೆ. ಬ್ಯಾಂಕಿಂಗ್‌ ಪರೀಕ್ಷೆಯಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ
ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯರು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರ ಬರೆದರೂ ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಪರಮೇಶ್ವರ್‌, ಬ್ಯಾಂಕಿಂಗ್‌ ಪರೀಕ್ಷೆಯಲ್ಲಿ ಪ್ರಾದೇಶಿಕ ಭಾಷೆಗೆ ಆದ್ಯತೆ ನೀಡಿದರೆ, ಕರ್ನಾಟಕ ಅಷ್ಟೇ ಅಲ್ಲ, ಇತರ ರಾಜ್ಯದವರಿಗೂ ಅನುಕೂಲವಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸುವುದರಿಂದ ಉತ್ತರ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಗೊಳ್ಳುತ್ತಾರೆ. ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಹಿಂದಿ ಭಾಷೆ ಮೇಲೆ ಹಿಡಿತ ಇಲ್ಲದಿರುವುದರಿಂದ ಬ್ಯಾಂಕಿಂಗ್‌ ಉದ್ಯೋಗ ಪಡೆಯಲು ಹರಸಾಹಸ ಪಡುವಂತಾಗಿದೆ. ಬ್ಯಾಂಕ್‌ನಲ್ಲಿನ ಚಲನ್‌ ಕೂಡ ಹಿಂದಿ, ಇಂಗ್ಲಿಷ್‌ನಲ್ಲಿ ಇರುವುದರಿಂದ ಕೋಟ್ಯಂತರ ಜನರು ವ್ಯವಹಾರ ನಡೆಸಲು ಇನ್ನೊಬ್ಬರ ನೆರವು ಪಡೆಯುವಂತಾಗಿದೆ. ಎಟಿಎಂ, ಬ್ಯಾಂಕ್‌
ಅಪ್ಲಿಕೇಶನ್‌ ಎಲ್ಲವನ್ನೂ ಹಿಂದಿ, ಇಂಗ್ಲಿಷ್‌ನಲ್ಲೇ ವ್ಯವಹರಿಸುವು ದಾದರೆ, ಕರ್ನಾಟಕದ ಜನರು ಯಾವ ಭಾಷೆಯಲ್ಲಿ ವ್ಯವಹರಿಸಬೇಕೆಂದು ಖಾರವಾಗಿ ಪ್ರಶ್ನಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next