Advertisement

ಕುಡಿವನೀರಿನ ಸಮಸ್ಯೆ ನೀಗಿಸಿ

06:47 AM Mar 14, 2019 | Team Udayavani |

ದೇವನಹಳ್ಳಿ: ಬೇಸಿಗೆ ಆರಂಭವಾಗಿದ್ದು, ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇ ಕೆಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಸವರಾಜು ಸೂಚನೆ ನೀಡಿದರು.

Advertisement

ತಾಲೂಕಿನ ಚಪ್ಪರದಕಲ್ಲು ಸರ್ಕಲ್‌ ಬಳಿಯ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ
ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ನೀರು ಪೂರೈಕೆಗೆ ಆದ್ಯತೆ ನೀಡಿ: ದೇವನಹಳ್ಳಿ, ನೆಲಮಂಗಲ, ವಿಜಯಪುರದ ಕೆಲವೊಂದು ವಾರ್ಡ್‌ಗಳಿಗೆ ವಾರಕ್ಕೊಮ್ಮೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗುವುದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಖಾಸಗಿ ಬೋರ್‌ವೆಲ್‌ಗ‌ಳನ್ನು
ಗುರುತಿಸಿ ನೀರು ಪೂರೈಕೆಗೆ ಆದ್ಯತೆ ನೀಡ ಬೇಕೆಂದು ಹೇಳಿದರು. 

ಮಳೆ ನೀರು ಸಂಗ್ರಹಕ್ಕೆ ಮುಂದಾಗಿ: ಬೆಂಗಳೂರು ಗ್ರಾಮಾಂತರ ಪ್ರದೇಶ ಬರ ಪೀಡಿತ ಜಿಲ್ಲೆಯಾಗಿದೆ. ಮಳೆ ಹೊರತು ಪಡಿಸಿದರೆ ಯಾವುದೇ ನದಿ ಮೂಲಗಳು ಇಲ್ಲದ್ದರಿಂದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಕೆರೆಗಳ ಸಂರಕ್ಷಣೆ, ಪುನಃಶ್ಚೇತನ ಮತ್ತು ಅಂತರ್ಜಲ ಮಟ್ಟ ಹೆಚ್ಚಳಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಪ್ರತಿ ಸಭೆಯಲ್ಲೂ ಪ್ರಸ್ತಾಪಿ ಸಲಾಗುತ್ತಿದೆ. ಮಳೆಗಾಲ ಆರಂಭವಾಗುವುದರೊಳಗೆ ಕೆರೆಯಲ್ಲಿನ ಹೂಳನ್ನು ತೆರವು ಗೊಳಿಸಿ, ರಾಜಕಾಲುವೆ ಹಾಗೂ ಕೆರೆಗಳ ಪುನರುಜ್ಜೀವನಗೊಳಿಸುವ ಮೂಲಕ ಮಳೆ ನೀರು ವ್ಯಯವಾಗದಂತೆ ಶೇಖರಣೆಗೆ ಒತ್ತು ನೀಡುವ ಕಾಮಗಾರಿಗಳನ್ನು ಪೂರ್ಣಗೊಳಿಸ ಬೇಕೆಂದು ನಿರ್ದೇಶಿಸಿದರು. 

ರೈತರ ಆದಾಯ ಹೆಚ್ಚಿಸಲು ಹಾಗೂ ಕೃಷಿಯೊಂದಿಗೆ ಹೈನುಗಾರಿಕೆಯನ್ನು ಉತ್ತೇಜಿಸುವ ಸಲುವಾಗಿ ಜಿಲ್ಲೆಯ ರೈತರಿಗೆ ಖಡಕ್‌ ನಾಥ್‌ ಕೋಳಿ ಮರಿಗಳನ್ನು ನೀಡಲು ಅಗತ್ಯ ವಿರುವ ಕೋಳಿ ಮೊಟ್ಟೆಗಳನ್ನು ಹೊರ ಜಿಲ್ಲೆ ಅಥವಾ ರಾಜ್ಯದಿಂದ ಖರೀದಿಸಿ, ಸ್ಥಳೀಯವಾಗಿ ಅಭಿವೃದ್ಧಿಪಡಿಸಿ, ಕೆಲ ರೈತರಿಗೆ ಸರಬರಾಜು ಮಾಡಬೇಕೆಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. 

Advertisement

ಅಭಿವೃದ್ಧಿಗೆ ಶ್ರಮಿಸಿ: ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭವಾಗಿರುವುದರಿಂದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಸಕ್ರಿಯವಾಗುವುದರೊಂದಿಗೆ ಕುಡಿಯುವ ನೀರು, ಮೇವು ಇನ್ನಿತರ ಅಗತ್ಯ ಸೌಲಭ್ಯಗಳಿಗೆ ಯಾವುದೇ ಸಮಸ್ಯೆ ಬಾರದಂತೆ ನೋಡಿ ಕೊಳ್ಳಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕೆಂದು ಖಡಕ್‌ ಸೂಚನೆ ನೀಡಿದರು. 

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತೋಟಗಾರಿಕೆ, ರೇಷ್ಮೆ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರದಂತೆ ಕಂದಾಯ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶಿಲನೆ ನಡೆಸಿದರು. 

ಸಭೆಯಲ್ಲಿ ಜಿಲ್ಲಾಧಿಕಾರಿ ಕರೀಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಆರ್‌.ಲತಾ, ಉಪ ವಿಭಾಗಾಧಿಕಾರಿ ಮಂಜುನಾಥ್‌, ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನೂತಾರಾಣಿ, ಹಿರಿಯ ಪೊಲೀಸ್‌ ಅಧಿಕಾರಿ ಮೋಹನ್‌ಕುಮಾರ್‌ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಮುಂತಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next