Advertisement
ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್. ಶೆಟ್ಟಿ ಇವರು 48 ನೇ ವಾರ್ಷಿಕ ವರದಿ ಮಂಡಿಸಿ, ಕಳೆದ ಒಂದು ವರ್ಷದಲ್ಲಿ ಸರ್ವರ ಸಹಕಾರದಿಂದ ನಡೆದ ವಿವಿಧ ಕಾರ್ಯಗಳ ವಿವರ ನೀಡಿದರು. ಅಲ್ಲದೆ ಭವಿಷ್ಯದಲ್ಲಿ ನಡೆಯಬೇಕಾದ ಕೆಲಸಗಳ ಬಗ್ಗೆಯೂ ಸಭಿಕರಿಗೆ ಮನವರಿಕೆ ಮಾಡಿದರು.
Related Articles
Advertisement
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಜಯ ಕೆ. ಶೆಟ್ಟಿ ಇವರು ಮಾತನಾಡಿ, ವಿದ್ಯಾವಂತ ಯುವಕರ ಸೇರ್ಪಡೆಯೊಂದಿಗೆ ಅನುಭವಿ ಹರಿಯರು ಜೊತೆಗೂಡಿ ಕಾರ್ಯಕಾರಿ ಸಮಿತಿಯ ಹಳೆ ಬೇರಿನೊಂದಿಗೆ ಹೊಸ ಚಿಗುರು ಸೇರಿದಂತಾಗಿದೆ. ಸಂಸ್ಥೆಯ ಬೆಳವಣಿಗೆ ತೀವ್ರಗತಿಯಲ್ಲಿ ಸಾಗುವಂತಾಗಲಿ. ಇಂದು ಮಹಿಳಾ ಸದಸ್ಯೆಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯ ಎಲ್ಲಾ ಕಾರ್ಯಕಲಾಪಗಳಿಗೂ ಇದೇ ರೀತಿಯ ಸಹಕಾರ ಪ್ರೋತ್ಸಾಹವನ್ನು ಎಲ್ಲರು ನೀಡಬೇಕು. ಸಂಸ್ಥೆಯು ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು, ಈ ವರ್ಷದಲ್ಲಿ ಎಲ್ಲಾ ಕಾರ್ಯಯೋಜನೆಗಳಿಗೆ ಎಲ್ಲರು ಒಮ್ಮತ, ಒಗ್ಗಟ್ಟಿನಿಂದ ಶ್ರಮಿಸಬೇಕು. ಸುವರ್ಣ ಮಹೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿ ಸೋಣ. ಸಂಘದ ಚರಿತ್ರೆಯಲ್ಲಿ ಇದನ್ನು ಅವಿಸ್ಮರಣೀಯ ಗೊಳಿಸಬೇಕು ಎಂದು ಸಂಘದ ಅಭಿವೃದ್ಧಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ, ಸದಸ್ಯ ಬಾಂಧವರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ನಾವೆಲ್ಲರೂ ಒಂದೇ. ನಮ್ಮೆಲ್ಲರ ಉದ್ದೇಶ ಈ ಸಂಸ್ಥೆಯ ಬೆಳವಣಿಗೆ ಎಂಬ ಭಾವನೆಯಿಂದ ಸಹಕರಿಸಬೇಕು. ನೂತನ ಕಾರ್ಯಕಾರಿ ಸಮಿತಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಸಂಘ ಹಾಗೂ ಶೈಕ್ಷಣಿಕ ಸಂಸ್ಥೆಗಳ ಕೀರ್ತಿಯನ್ನು ಮತ್ತಷ್ಟು ಏರಿಸುವಲ್ಲಿ ನಾವೆಲ್ಲರು ಕಾರ್ಯಪ್ರವೃತ್ತರಾಗೋಣ ಎಂದು ನುಡಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2018-2021 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.