Advertisement

ವಿಜ್ಞಾನಿ ಯಶ್‌ ಪಾಲ್‌ ಇನ್ನಿಲ್ಲ

06:25 AM Jul 26, 2017 | Team Udayavani |

ನವದಹೆಲಿ: ಪ್ರಸಿದ್ಧ ಭಾರತೀಯ ವಿಜ್ಞಾನಿ, ಶೈಕ್ಷಣಿಕ ಕ್ಷೇತ್ರದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದ ಪ್ರೊ.ಯಶ್‌ ಪಾಲ್‌ (90) ಅವರು ಸೋಮವಾರ ರಾತ್ರಿ ನಿಧನರಾದರು. ಕಾಸ್ಮಿಕ್‌ ಕಿರಣಗಳ ಬಗ್ಗೆ ವ್ಯಾಪಕ ಸಂಶೋಧನೆ ನಡೆಸಿದ್ದ ಅವರು, ಈ ಕುರಿತ ಸಂಶೋಧನಾ ಸಂಸ್ಥೆಗಳನ್ನೂ ಸ್ಥಾಪಿಸಲು ಕಾರಣವಾಗಿದ್ದರು. ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದ ಅವರು ನೋಯ್ಡಾದ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆ ನೆರವೇರಿದೆ. ವಿವಿ ಧನಸಹಾಯ ಆಯೋಗದ ಅಧ್ಯಕ್ಷರಾಗಿ, ಟಾಟಾ ಇನ್‌ಸ್ಟಿಟ್ಯೂಟ್‌ ಆಫ್ ಫ‌ಂಡ ಮೆಂಟಲ್‌ ರಿಸರ್ಚ್‌ನ ವಿಜ್ಞಾನಿಯಾಗಿ ಪಾಲ್‌ ಕೆಲಸ ಮಾಡಿದ್ದರು. ಅವರ ಕೊಡುಗೆಗೆ ಪದ್ಮ ವಿಭೂಷಣ ನೀಡಿ ಗೌರವಿಸಲಾಗಿತ್ತು. ಪಾಲ್‌ ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next