Advertisement

“ಪೆಟ್ಟಾಯಿ ಪಿಲಿ” ಹಿರಿಯ ತುಳು ನಟ ಸದಾಶಿವ ಸಾಲ್ಯಾನ್ ಇನ್ನಿಲ್ಲ

03:35 PM Jul 09, 2018 | Sharanya Alva |

ಉಡುಪಿ:ತುಳು ಹಾಗೂ ಕನ್ನಡ ಸಿನಿಮಾಗಳಲ್ಲಿ ಮಿಂಚಿದ್ದ ನಟ ಸದಾಶಿವ ಸಾಲ್ಯಾನ್ ಭಾನುವಾರ ಮುಂಬೈನ ನಿವಾಸದಲ್ಲಿ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

ಹವ್ಯಾಸಿ ರಂಗಭೂಮಿಯಲ್ಲಿ ಗುರುತಿಸಿಕೊಂಡು ಬೆಳೆದಿದ್ದ ಸದಾಶಿವ ಸಾಲ್ಯಾನ್ ಅವರು ಭಾಗ್ಯವಂತೆದಿ, ಬದ್ಕೆರೆ ಬುಡ್ಲೆ, ಪಟ್ಟಾಯಿ ಪಿಲಿ, ಸತ್ಯ ಓಲುಂಡು, ಸಮರ ಸಿಂಹ, ಅನಾಥ ರಕ್ಷಕ, ಸಿಡಿದೆಡ್ಡ ಪಾಂಡವರು, ಕಾಲೇಜು ರಂಗ ಸೇರಿದಂತೆ ಸುಮಾರು 50 ಸಿನಿಮಾಗಳಲ್ಲಿ ನಟಿಸಿದ್ದರು.

ಸದಾಶಿವ ಸಾಲ್ಯಾನ್ ಮೂಲತಃ ಉಡುಪಿಯ ತೆಂಕ ಎರ್ಮಾಳ್ ನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ಸಾಲ್ಯಾನ್ ಅವರು ಮುಂಬೈಗೆ ವಲಸೆ ಹೋಗಿದ್ದರು. ಅಲ್ಲಿಯೇ ಅಂಧೇರಿಯ ಚಿನ್ಮಯ ಕಾಲೇಜ್ ನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ಬಳಿಕ ಮುಂಬೈನ ಸೆಂಟ್ರಲ್ ಬ್ಯಾಂಕ್ ನ ಉದ್ಯೋಗಿಯಾಗಿ ಕಾರ್ಯನಿರ್ವಹಿಸಿದ್ದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿದ್ದ ಸಾಲ್ಯಾನ್ ಅವರು ರಂಗಭೂಮಿಯತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ಇದರ ಪರಿಣಾಮ ತುಳು, ಹಿಂದಿ ಹಾಗೂ ಮರಾಠಿಯ ಸುಮಾರು 500 ನಾಟಕಗಳನ್ನು ನಿರ್ದೇಶಿಸಿದ್ದರು. ತದನಂತರ ರಂಗಕರ್ಮಿ ಕೆಎನ್ ಟೈಲರ್ ಮೂಲಕ ತುಳು ಸಿನಿಮಾ ರಂಗದ ನಂಟು ಸಾಲ್ಯಾನ್ ಅವರಿಗೆ ಆಯಿತು. ಹೀಗೆ ಸುಮಾರು 50 ಸಿನಿಮಾಗಳಲ್ಲಿ ನಟಿಸಿ ಹೆಸರು ಗಳಿಸಿದ್ದರು. ಅನಾರೋಗ್ಯದ ಕಾರಣದಿಂದ ಸದಾಶಿವ ಸಾಲ್ಯಾನ್ ಅವರು ನಟನೆಯಿಂದ ದೂರ ಉಳಿದಿದ್ದರು. ಇವರು ಪತ್ನಿ ಸುಶೀಲಾ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next