Advertisement
ಬುಧವಾರ ಪಟ್ಟಣದ ಸಾಮರ್ಥ್ಯಸೌಧದಲ್ಲಿ ಮಳೆ ಹಾನಿ ಬಗ್ಗೆ ಕರೆದಿದ್ದ ತುರ್ತುಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಸೋಮವಾರ ಸುರಿದ ಧಾರಾಕಾರ ಮಳೆಗೆ ರೈತರ ಬದುಕು ಮೂರಾಬಟ್ಟೆಯಾಗಿದೆ. ಎಲ್ಲಾ ಬೆಳೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಇದರಿಂದ ಕಂಗಲಾದ ರೈತರು ಮುಂದಿನ ಜೀವನವನ್ನು ನೆನೆಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಇದನ್ನು ಗಮನಿಸಿದ ನಾನು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ.
ಅ ಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಶಾಸಕರಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದೇ ಅಲ್ಲದೆ ಇಂತಹ ತುರ್ತು ಸಂದರ್ಭದಲ್ಲೂ ಅವರು ಮನೆಯಲ್ಲಿ ಕೂರದೆ ಜಮೀನು, ಮನೆ ಕಳೆದುಕೊಂಡವರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸಲು ರೇಣುಕಾಚಾರ್ಯ ಪ್ರಯತ್ನ ಮಾಡುತ್ತಿದ್ದಾರೆ. ಅವರ ಉತ್ಸಹವನ್ನು ನಾವೂ ಮೈಗೂಡಿಸಿಕೊಳ್ಳೋಣ ಎಂದರು.
ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಸಹಾಯಕ ಅಭಿಯಂತರ ತ್ಯಾಗರಾಜ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಘವೇಂದ್ರಪ್ರಸಾದ್, ತಹಶೀಲ್ದಾರರಾದ ರಶ್ಮಿ, ರೇಣುಕಾ, ಪಿಎಸ್‌ಐ ಬಸವರಾಜ್ ಬಿರಾದಾರ್, ಬಿಇಒ ಮಂಜುನಾಥಸ್ವಾಮಿ ಭಾಗವಹಿಸಿದ್ದರು.
ಹಣಕ್ಕೆ ಪೀಡಿಸಿದರೆ ಸಹಿಸಲ್ಲಸರ್ಕಾರ ನಿಮಗೂ, ನನಗೂ ವೇತನ ನೀಡುತ್ತಿದೆ. ಹಾಗಾಗಿ ನಾವೆಲ್ಲರೂ ಸೇರಿ ರೈತರ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಬೇಕು. ಆದರೆ ನೀವು ಮುಗ್ಧ ರೈತರ ಬಳಿ ಕೈ ಚಾಚುವುದು ಸರಿಯೇ, ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿ. ಹಣಕ್ಕೆ ಪೀಡಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರೇಣುಕಾಚಾರ್ಯ ಎಚ್ಚರಿಸಿದರು.