Advertisement

ರೇಣುಕಾಚಾರ್ಯರ ವಿಚಾರಧಾರೆಗಳು ಸಾರ್ವಕಾಲಿಕ

06:18 PM Mar 24, 2022 | Team Udayavani |

ರಾಣಿಬೆನ್ನೂರ: ವಿಶ್ವ ಬಂಧುತ್ವದ ಆದರ್ಶ ಮಾನವೀಯ ಮೌಲ್ಯಗಳನ್ನು ತೋರಿಸಿದ ಜಗದ್ಗುರು ರೇಣುಕಾಚಾರ್ಯರ ವಿಚಾರಧಾರೆಗಳು ಸಾರ್ವಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

Advertisement

ಬುಧವಾರ ನಗರದಲ್ಲಿ ಜರುಗಿದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಯುಗಮಹೋತ್ಸವ ಧರ್ಮ ಸಮಾರಂಭ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಅಂತರಂಗ ಬಹಿರಂಗ ಶುದ್ಧಿಗೆ ಪ್ರಾಧಾನ್ಯತೆ ಕೊಟ್ಟ ಶ್ರೀ ಜಗದ್ಗುರು ರೇಣುಕಾಚಾರ್ಯರು ಧರ್ಮದ ದಶ ಗಾತ್ರಗಳನ್ನು ಶೋಧಿಸಿ ಭಕ್ತರನ್ನು ಉದ್ಧರಿಸಿದರು.

ಮಹಾಜ್ಞಾನಿ ಅಗಸ್ತ್ಯ ಮಹರ್ಷಿಗಳಿಗೆ ಶಿವಾದ್ವೆತ ತತ್ವ ಸಿದ್ಧಾಂತವನ್ನು ಬೋಧಿಸಿ ಹರಸಿದವರು ಎಂದರು. ಧಾರ್ಮಿಕ ಕ್ರಾಂತಿಯ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ, ಅಸ್ಪೃಶ್ಯರ ಉದ್ಧಾರ ಮತ್ತು ಮಹಿಳೆಯರಿಗೆ ಧಾರ್ಮಿಕ ಆಚರಣೆಗಳನ್ನಿತ್ತು ಹರಸಿದ ಕೀರ್ತಿ ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಕಾಯಕ ಮತ್ತು ದಾಸೋಹದ ಮೂಲಕ ಸಕಲರಿಗೂ ಯಶಸ್ಸನ್ನು ಉಂಟು ಮಾಡಿದರು. ಮಹಿಳೆಯರಿಗೆ ಮತ್ತು ರೈತ ಸಮುದಾಯಕ್ಕೆ ಅವರು ಕೊಟ್ಟ ಕೊಡುಗೆ
ಅಮೂಲ್ಯವಾದ್ದದ್ದು ಎಂದರು.

ನೆಗಳೂರಿನ ಗುರುಶಾಂತೇಶ್ವರ ಸ್ವಾಮೀಜಿ, ಮದ್ದರಕಿ ಹಿರೇಮಠದ ಶಿವಯೋಗಿ ಶಿವಾಚಾರ್ಯ ಶ್ರೀಗಳು ಆಶೀರ್ವಚನ ನೀಡಿದರು. ಸ್ಥಳೀಯ ಪುಟ್ಟಯ್ಯನ ಮಠದ ಗುರುಬಸವ ಸ್ವಾಮೀಜಿ, ಲಿಂಗದಹಳ್ಳಿಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಹಾವೇರಿಯ ರುದ್ರಶಿವಾಚಾರ್ಯ ಸ್ವಾಮೀಜಿ, ಕೂಡಲದ ಗುರಮಹೇಶ್ವರ ಶ್ರೀಗಳು, ಆವರಗೊಳ್ಳದ ಓಂಕಾರ ಶಿವಾಚಾರ್ಯ ಶ್ರೀಗಳು, ಕೋಡಿಯಾ ಪುಣ್ಯಕೋಟಿ ಮಠದ ಜಗದೀಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.

ಶಾಸಕ ಅರುಣಕುಮಾರ ಪೂಜಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಸಭಾ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಎಸ್‌.ಎಸ್‌. ರಾಮಲಿಂಗಣ್ಣನವರ, ಹಾಲಮ್ಮ ಪೂಜಾರ, ಜಿಪಂ ಮಾಜಿ ಸದಸ್ಯೆ ಮಂಗಳಗೌರಿ ಪೂಜಾರ, ಸಿದ್ದು ಚಿಕ್ಕಬಿದರಿ, ಬಸವರಾಜ ಹುಲ್ಲತ್ತಿ, ಪ್ರಭುಸ್ವಾಮಿ ಕರ್ಜಗಿಮಠ, ಹಾಲಸ್ವಾಮಿ ಶಾಸ್ತ್ರೀ ಸೇರಿದಂತೆ ಮತ್ತಿತರರು ಇದ್ದರು.

Advertisement

ಶ್ರೀ ಚನ್ನೇಶ್ವರ ಮಠದ ವಟುಗಳು ವೇದ ಘೋಷ ನೆರವೇರಿಸಿದರು. ಜಿ.ವಿ. ಸಾಲಿಮಠ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಪ್ರಾತಃ ಕಾಲದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ಸಂಭ್ರಮದಿಂದ ಜರುಗಿತು.

Advertisement

Udayavani is now on Telegram. Click here to join our channel and stay updated with the latest news.

Next