Advertisement
ಮಂಗಳವಾರ ಬೆಳಗ್ಗೆ ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಿರುವ ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
Related Articles
Advertisement
ಬೀದಿ ನಾಯಿಗಳು ಶವವನ್ನು ಚರಂಡಿಯಿಂದ ಎಳೆದುಕೊಂಡು ಹೋಗುತ್ತಿರುವುದನ್ನು ಕಂಡ ನಿವಾಸಿಗಳು ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇಹದಲ್ಲಿ ಗಾಯದ ಗುರುತುಗಳಿದ್ದವು. ತನಿಖೆ ವೇಳೆ ಪೊಲೀಸರು ಕೆಲವು ಶಂಕಿತರನ್ನು ಬಂಧಿಸಿದ್ದರು. ಅವರು ನೀಡಿದ ಮಾಹಿತಿಯ ಮೇರೆಗೆ ನಟ ದರ್ಶನ್ ಬಂಧನವಾಗಿದೆ.
“ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ದರ್ಶನ್ ಹೆಸರನ್ನು ಬಹಿರಂಗಪಡಿಸಿದ್ದಾರೆ. ಇದಾದ ನಂತರ ಪೊಲೀಸರು ಅವರನ್ನು ತನಿಖೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ” ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.