Advertisement

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

04:56 PM Oct 28, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ (Renukaswamy Case) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಸೋಮವಾರ) ಹೈಕೋರ್ಟ್‌ನಲ್ಲಿ ನಡೆದಿದೆ. ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆದಿದೆ.

Advertisement

ಅ. 22ರಂದು ಮೊದಲ ಬಾರಿ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಈ ವೇಳೆ ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

ಇಂದು ದರ್ಶನ್‌ ಪರ ವಕೀಲರು ವೈದ್ಯಕೀಯ ವರದಿಯನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಿ ಜಾಮೀನು ಕೋರಿ ವಾದ ಮಂಡಿಸಿದ್ದಾರೆ.

ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ವೈದ್ಯಕೀಯ ವರದಿಯ ಪ್ರತಿಯನ್ನು ನ್ಯಾಯಾಧೀಶರಿಗೆ ಸಲ್ಲಿಸಿದ್ದಾರೆ. ಬಳಿಕ ವಿಚಾರಣೆಯನ್ನು ಮಂಗಳವಾರ (ಅ.29) ಕ್ಕೆ ಮುಂದೂಡಲಾಗಿದೆ.

Advertisement

ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ ಪಿಪಿ ಪ್ರಸನ್ನ ಕುಮಾರ್‌ ಕೋರ್ಟ್‌ ಬಳಿ ಕಾಲಾವಕಾಶ ಕೇಳಿದ್ದಾರೆ.

ದರ್ಶನ್‌ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ಬಳ್ಳಾರಿಯ “ವಿಜಯನಗರ ವೈದ್ಯಕೀಯ ಸಂಸ್ಥೆ’ನಲ್ಲಿ (ವಿಮ್ಸ್‌) ಎಂಆರ್‌ಐ ಸ್ಕ್ಯಾನ್‌ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next