ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಬುಧವಾರಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹಲವು ಬಾರಿ ಮುಂದೂಡಲಾಗಿದೆ. ಈ ಹಿಂದೆ ಮಂಗಳವಾರಕ್ಕೆ ಮುಂದೂಡಲಾಗಿತ್ತು. ಅದರಂತೆ ಮಂಗಳವಾರ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಇದೀಗ ಬುಧವಾರ ಮಧ್ಯಾಹ್ನ 2.45ಕ್ಕೆ ವಿಚಾರಣೆ ಮುಂದೂ ಡ ಲಾಗಿದೆ. ಪವಿತ್ರಾ ಗೌಡ ಸದ್ಯ ಬೆಂಗಳೂರಿನ ಪರ ಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ.
ಪವಿತ್ರಾ ಗೌಡ ಪರ ವಕೀಲರ ವಾದವೇನು?: ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದರು. ರೇಣುಕಸ್ವಾಮಿ ಕಪಾಳಕ್ಕೆ ಪವಿತ್ರಾ ಹೊಡೆದಿರುವುದಾಗಿ ಆರೋಪಿ ಸಲಾಗಿದೆ. ಆದರೆ, ಪವಿತ್ರಾ ಗೌಡ ಕೊಲೆಯ ಒಳಸಂಚಿನ ಭಾಗವಲ್ಲ. ಪ್ರಕರಣದಲ್ಲಿ ಸಂಪೂರ್ಣವಾಗಿ ಆರೋಪಿ ಗಳ ಸ್ವ-ಇಚ್ಛಾ ಹೇಳಿಕೆ ಆಧರಿಸಲಾಗಿದೆ. ಪ್ರತ್ಯಕ್ಷದರ್ಶಿ ಹೇಳಿಕೆ ದಾಖಲಾಗಲಿಲ್ಲ.
ಕೇಸ್‌ನಲ್ಲಿ ಕೊಲೆಯ ಸಂಚು ಮಾತ್ರವೇ ಅಥವಾ ರೇಣುಕಸ್ವಾಮಿ ಆಕಸ್ಮಿಕವಾಗಿ ಮೃತಪಟ್ಟಿದ್ದರೆ ಎಂಬುದು ನಂತರ ತಿಳಿಯಬೇಕಿದೆ. ಕೊಲೆ ಪ್ರಕರಣದ ತನಿಖೆ ಮುಕ್ತಾಯಗೊಂಡಿದೆ. ಹೀಗಾಗಿ ಪವಿತ್ರಾಗೌಡಳನ್ನು ಓರ್ವ ಮಹಿಳೆ ಎಂದು ಪರಿಗಣಿಸಿ ಜಾಮೀನು ನೀಡಬೇಕು ಎಂದು ವಾದ ಮಂಡಿಸಿದರು. ಈ ನಡುವೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸಹ ಉಲ್ಲೇಖೀಸಿದರು. ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಇಂದು
ದರ್ಶನ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ
ಬೆಂಗಳೂರು: ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಬುಧವಾರ ಮುಕ್ತಾಯ ಗೊಳ್ಳಲಿದ್ದು, ತನಿಖಾಧಿಕಾರಿಗಳು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಮತ್ತೂಮ್ಮೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ಆ ಬಳಿಕ ದರ್ಶನ್ ಸೇರಿ 10 ಮಂದಿ ಆರೋಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲಾಗುತ್ತದೆ.