Advertisement

Renukaswamy Case; ಜೈಲಲ್ಲಿ ಮನೆ ಊಟ ಕೇಳಿ ದರ್ಶನ್‌ ಅರ್ಜಿ: ಸರಕಾರ, ಪೊಲೀಸರಿಗೆ ನೋಟಿಸ್‌

10:05 PM Jul 10, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ತಮಗೆ ಜೈಲಿನಲ್ಲಿ ಮನೆ ಊಟ ಒದಗಿಸಲು ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ನಟ ದರ್ಶನ್‌ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲವು ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕ, ನಗರ ಪೊಲೀಸ್‌ ಆಯುಕ್ತ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿತು.

ಕರ್ನಾಟಕ ಕಾರಾಗೃಹ ಅಧಿನಿಯಮ-1963 ಹಾಗೂ ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆ ಕೈಪಿಡಿ-2021ರಲ್ಲಿರುವ ಕಾನೂನು ಅವಕಾಶಗಳನ್ನು ಪರಿಶೀಲಿಸಬೇಕಾಗಿದೆ. ಪೂರಕ ದಾಖಲೆ-ಮಾಹಿತಿಗಳನ್ನು ಸಲ್ಲಿಸುವಂತೆ ಅರ್ಜಿದಾರರು ಪರ ಹಾಗೂ ಪೊಲೀಸರ ಪರ ವಕೀಲರಿಗೆ ನ್ಯಾಯಪೀಠ ಸೂಚನೆ ನೀಡಿತು. ಅರ್ಜಿದಾರರ ಪರ ಹಿರಿಯ ವಕೀಲ ಕೆ.ಎನ್‌. ಫ‌ಣೀಂದ್ರ, ಪೊಲೀಸರ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್‌ ಹಾಜರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next