Advertisement
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲ ಸಾಕ್ಷ್ಯಗಳ ಎಫ್ಎಸ್‌ಎಲ್ ವರದಿಯಲ್ಲಿ ಆರೋಪಿಗಳ ಪಾತ್ರ ಸಾಬೀತಾಗಿದೆ ಮತ್ತು ತಾಂತ್ರಿಕ ಸಾಕ್ಷಿಗಳ ಬಗ್ಗೆ ಕೆಲ ವರದಿ ಪಡೆದುಕೊಳ್ಳುವುದು ಬಾಕಿ ಇದೆ. ಇದೇ ವೇಳೆ ಇನ್ನು 10-15 ದಿನಗಳ ಒಳಗೆ ಪ್ರಕರಣದ ತನಿಖೆ ಪೂರ್ಣಗೊಳ್ಳಲಿದ್ದು, ಅನಂತರ ಆರೋಪಪಟ್ಟಿ ಸಲ್ಲಿಸುತ್ತೇವೆ ಎಂದು ಪೊಲೀಸರು ಕೋರ್ಟ್‌ಗೆ ಮಾಹಿತಿ ನೀಡಿದರು. ಇನ್ನು ಕೋರ್ಟ್‌ನಲ್ಲಿ ಪ್ರಕರಣದ ದರ್ಶನ್ ಹೊರತು ಪಡಿಸಿ ಕೆಲ ಆರೋಪಿಗಳ ಪರ ವಕೀಲರು ತಮ್ಮ ಕಕ್ಷಿದಾರರ ಪರ ವಾದ ಮಂಡಿಸಿದರು.
ಪ್ರಕರಣದ 14ನೇ ಆರೋಪಿ ಪ್ರದೂಶ್‌ನನ್ನು ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಅದಕ್ಕೆ ತಡೆಯಾಜ್ಞೆ ನೀಡುವಂತೆ ಪ್ರದೋಶ್ ಕೋರ್ಟ್‌ಗೆ ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದ. ನನ್ನ ತಂದೆಗೆ ಕ್ಯಾನ್ಸರ್ ಇದೆ. ತಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ತಮ್ಮನ್ನು ಬೇರೆ ಕಡೆಗೆ ಶಿಫ್ಟ್ ಮಾಡಬೇಡಿ ಎಂದು ಪ್ರದೂಶ್ ಕೇಳಿಕೊಂಡಿದ್ದಾನೆ. ಆದರೆ, ಈ ಮನವಿಯನ್ನು ಕೋರ್ಟ್ ತಿರಸ್ಕರಿಸಿತು.