Advertisement
ಚಿತ್ರರಂಗದ ಹಲವರು ಈ ಪ್ರಕರಣಕ್ಕೆ ಸಂಬಂಧಿಸಿ ಹಲವು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರು ಪಾರದರ್ಶಕ ವಿಚಾರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Related Articles
Advertisement
ಈ ಹೈಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…
ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) (ಕಾನೂನು ಸುಧಾರಣೆಗಳು #CriminalJustice Reforms)
ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗಿಯೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.
ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆ ಪೊಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ.