Advertisement
ಪಾಸ್ಪೋರ್ಟ್ ವಶಕ್ಕೆಹೈಕೋರ್ಟ್ನ ಮುಂದಿನ ಆದೇಶಕ್ಕೆ ಒಳಪಟ್ಟು ಮಧ್ಯಾಂತರ ಜಾಮೀನು ಅವಧಿ ಮುಗಿದ ತತ್ಕ್ಷಣ ವಿಚಾರಣಾಧೀನ ನ್ಯಾಯಾಲಯಕ್ಕೆ ಶರಣಾಗಬೇಕು. ತಮ್ಮ ಪಾಸ್ಪೋರ್ಟ್ ಅನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಜಾಮೀನು ಅವಧಿಯಲ್ಲಿ ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ ಎಂಬ ಷರತ್ತನ್ನು ಹಾಕಲಾಗಿದೆ.
Related Articles
Advertisement
ಜೈಲಿನ ಆಸ್ಪತ್ರೆ ಅಥವಾ ಸರಕಾರಿ ಆಸ್ಪತ್ತೆಯಲ್ಲಿ ನಿಗದಿತ ಚಿಕಿತ್ಸೆ ಲಭ್ಯವಿಲ್ಲದಿದ್ದರೆ ಮಾತ್ರ ಮಧ್ಯಾಂತರ ಅಥವಾ ಸಾಮಾನ್ಯ ಜಾಮೀನು ನೀಡಬಹುದು. ಈ ಪ್ರಕರಣದಲ್ಲಿ ಶಿಫಾರಸು ಮಾಡಿರುವ ಚಿಕಿತ್ಸೆಯು ಜೈಲಿನ ಆಸ್ಪತ್ರೆ ಅಥವಾ ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ ಮತ್ತು ದರ್ಶನ್ಗೆ ವೈದ್ಯಕೀಯ ನೆಲೆಯಲ್ಲಿ ಜಾಮೀನು ನೀಡಬಾರದು ಎಂಬ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದ ಸಮರ್ಥನೀಯವಾಗಿಲ್ಲ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ.
ಇತರ ಷರತ್ತುಗಳು?* ವೈದ್ಯಕೀಯ ತಪಾಸಣೆ, ಶಸ್ತ್ರಚಿಕಿತ್ಸೆ, ಎಷ್ಟು ದಿನ ಆಸ್ಪತ್ರೆಗೆ ದಾಖಲಾಗಿರಬೇಕು ಎಂಬ ಮಾಹಿತಿಯನ್ನು ವಾರದೊಳಗೆ ಕೋರ್ಟ್ಗೆ ಸಲ್ಲಿಸಬೇಕು. * 2 ಲಕ್ಷ ರೂ. ವೈಯಕ್ತಿಕ ಬಾಂಡ್, ಇಬ್ಬರ ಭದ್ರತೆ ಒದಗಿಸಬೇಕು. * ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು, ಸಾಕ್ಷ್ಯ ತಿರುಚಬಾರದು. * ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ದಾಖಲೆಗಳು ಮತ್ತು ಆ ಚಿಕಿತ್ಸೆಯ ಮುನ್ನೋಟವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. * ಜಾಮೀನಿನ ಅವಧಿಯಲ್ಲಿ ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು. * ಹೈಕೋರ್ಟ್ನ ಮುಂದಿನ ಆದೇಶಕ್ಕೆ ಒಳಪಟ್ಟು ಮಧ್ಯಂತರ ಜಾಮೀನು ಅವಧಿ ಮುಗಿದ ತತ್ಕ್ಷಣ ವಿಚಾರಣಾಧೀನ ನ್ಯಾಯಾಲಯಕ್ಕೆ ಶರಣಾಗಬೇಕು. * ಪಾಸ್ಪೋರ್ಟ್ ಅನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು. * ಜಾಮೀನು ಅವಧಿಯಲ್ಲಿ ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ. ಮುಂದೇನು?
* ಸಾಮಾನ್ಯ ಜಾಮೀನಿಗಾಗಿ ಕಾನೂನು ಹೋರಾಟ ಮುಂದುವರಿಸಬಹುದು. * 6 ವಾರಗಳ ಚಿಕಿತ್ಸೆಯ ಬಳಿಕ ವೈದ್ಯಕೀಯ ಪರಿಸ್ಥಿತಿಗೆ ಅನುಗುಣವಾಗಿ ಜಾಮೀನಿನ ಅವಧಿಯನ್ನು ಮತ್ತಷ್ಟು ವಿಸ್ತರಿಸಲು ಮನವಿ ಮಾಡಬಹುದು. * ಜಾಮೀನು ಅವಧಿಯೊಳಗೆ ಆರೋಗ್ಯ ಸುಧಾರಣೆಯಾಗಿ, ಸಾಮಾನ್ಯ ಜಾಮೀನು ಸಿಗದಿದ್ದರೆ 6 ವಾರಗಳ ಅವಧಿ ಮುಕ್ತಾಯಗೊಂಡ ಬಳಿಕ ಮತ್ತೆ ಜೈಲಿಗೆ ಹೋಗಬೇಕು. * ಹೈಕೋರ್ಟ್ ಸಾಮಾನ್ಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರೆ ಸುಪ್ರೀಂ ಕೋರ್ಟ್ನಲ್ಲಿ ಅದನ್ನು ಪ್ರಶ್ನಿಸಬಹುದು. * ಹೈಕೋರ್ಟ್ ವಿಧಿಸಿರುವ ಜಾಮೀನು ಷರತ್ತುಗಳ ಉಲ್ಲಂಘನೆಯಾದರೆ ಜಾಮೀನು ರದ್ದಾಗಬಹುದು.