Advertisement

ಗ್ರಾಮದ ರಸ್ತೆ ಸರಿಪಡಿಸಿ

05:52 PM Nov 01, 2019 | Suhan S |

ತುಮಕೂರು: ತುರುವೇಕೆರೆ ತಾಲೂಕಿನ ದಬ್ಬೆಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಲ್‌ ಗ್ರಾಮದಲ್ಲಿ ಮಳೆಯಿಂದ ರಸ್ತೆ ಕೆಸರುಮಯವಾಗಿದ್ದು, ಓಡಾಡಲು ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ರಸ್ತೆ ಅಭಿವೃದ್ಧಿ ಕಂಡು ಹಲವು ವರ್ಷಗಳೇ ಕಳೆದಿದ್ದು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚುನಾವಣೆ ವೇಳೆ ರಸ್ತೆ ಆಶ್ವಾಸನೆ ನೀಡುವ ರಾಜಕಾರಣಿಗಳು ಬಳಿಕ ಇತ್ತ ತಲೆ ಹಾಕುವುದಿಲ್ಲ. ರಸ್ತೆ ಸಮಸ್ಯೆಯಿಂದ ಬೇಸತ್ತು ಹಲವು ಬಾರಿ ಹುಲಿಕಲ್‌ ಗ್ರಾಮ ಪಂಚಾಯಿತಿಗೆ ಮನವಿ ನೀಡಿದರೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಲಿ ಸದಸ್ಯರಾಗಲಿ ಯಾವುದೇ ಕ್ರಮಗಳು ಕೈಗೊಂಡಿಲ್ಲ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಸ್ತೆ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಹುಲಿಕಲ್‌ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್‌ ಮಾತನಾಡಿ, ಹುಲಿಕಲ್‌ ಗ್ರಾಮದ ರಸ್ತೆಗೆ ಹಿಂದೆ ಕಾಂಕ್ರಿಟ್‌ ಹಾಕಿ ಅಭಿವೃದ್ಧಿಪಡಿಸಲಾಗಿತ್ತು. ಗ್ರಾಮದ ಕೆಂಪಮ್ಮ ದೇವಿ ರಥ ಈ ರಸ್ತೆಯಲ್ಲಿ ಸಾಗುವುದರಿಂದ ರಸ್ತೆ ಬೇಗನೇ ಹಾಳಾಗುತ್ತದೆ. ರಸ್ತೆ ಹಾಳಾಗದಂತೆ ಯಾವ ರೀತಿಯಲ್ಲಿ ಅಭಿವೃದ್ಧಿಪಡಿಸಬಹುದು ಎಂಬುದನ್ನು ಗ್ರಾಮದ ಮುಖಂಡರ ಜೊತೆ ಚರ್ಚಿಸಲಾಗುವುದು. ಅಲ್ಲದೇ ಪಿಡಿಒ, ಶಾಸಕರ ಗಮನಕ್ಕೂ ತಂದು ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next