Advertisement

ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಿ: ಪಟ್ಟಣಶೆಟ್ಟಿ

05:28 PM Jul 22, 2018 | Team Udayavani |

ಬಾದಾಮಿ: ಸಹಕಾರಿ ಸಂಘಗಳು ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತ ಪ್ರಗತಿ ಪಥದತ್ತ ಮುನ್ನುಗ್ಗುತ್ತಿವೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಸಂಘಗಳು ಗ್ರಾಹಕರೊಂದಿಗೆ ಸೌಜನ್ಯ ವರ್ತನೆ ತೋರಿಸಿ ಸಹಕಾರಿ ನಿಯಮಗಳಿಗೆ ಅನುಗುಣವಾಗಿ ಅಸ್ತಿತ್ವವನ್ನು ಕಾಪಾಡಿಕೊಂಡು ಹೋಗುತ್ತಿರುವ ಕಾರ್ಯ ಶ್ಲಾಘನೀಯ ಎಂದು ವೀರಪುಲಿಕೇಶಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಹೇಳಿದರು.

Advertisement

ತಾಲೂಕಿನ ಚೊಳಚಗುಡ್ಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ಮಾತನಾಡಿ, ಈ ಭಾಗದ ಸಹಕಾರಿಗಳ ಹಾಗೂ ಆಡಳಿತ ಮಂಡಳಿ ನೆರವಿನಿಂದ ಇಲ್ಲಿನ ಸಹಕಾರಿ ಸಂಘವು ಶತಮಾನೋತ್ಸವವನ್ನು ಆಚರಿಸುವುದರ ಜೊತೆಗೆ ಲಾಭದತ್ತ ಮುನ್ನಡೆಯುತ್ತಿದೆ ಎಂದು ಹೇಳಿದರು. ವಿ.ಪ ಸದಸ್ಯ ಅರುಣ ಶಹಾಪುರ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ ಮಾತನಾಡಿ, ಸಹಕಾರ ಸಂಘದ ತತ್ವಾದರ್ಶ ಅರಿತು ಹಣಕಾಸಿನ ವಹಿವಾಟು ನಡೆಸಿ ಜನ ಸಾಮಾನ್ಯರ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮಹಾಂತೇಶ ಮಮದಾಪುರ ಹಾಗೂ ಡಿಸಿಸಿ ಬ್ಯಾಂಕ ನಿರ್ದೇಶಕ ಕುಮಾರಗೌಡ ಜನಾಲಿ ಮಾತನಾಡಿ, ಸಹಕಾರಿ ಸಂಘಗಳಲ್ಲಿ ಪಡೆದಿರುವ ಸಾಲವನ್ನು ಸದುಪಯೋಗ ಪಡಿಸಿಕೊಂಡು ಸಕಾಲಕ್ಕೆ ಮರುಪಾವತಿ ಮಾಡುವ ಸಂಘದ ಪ್ರಗತಿಗೆ ಸಹಕರಿಸಬೇಕು ಎಂದರು.

ಶಿವಯೋಗ ಮಂದಿರ ಸಂಸ್ಥೆ ಅಧ್ಯಕ್ಷ ಡಾ.ಸಂಗನಬಸವ ಶ್ರೀ ಸಮಾರಂಭ ಉದ್ಘಾಟಿಸಿದರು. ಹುಬ್ಬಳ್ಳಿ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಸಾನಿಧ್ಯ, ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀ ನೇತೃತ್ವ, ಸಮ್ಮುಖವನ್ನು ಗುರುಮೂರ್ತಿ ಶಿವಾಚಾರ್ಯರು ವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ವೀರನಗೌಡ ಪಾಟೀಲ ಮಾತನಾಡಿ, ಸಂಘವು ಶತಮಾನೋತ್ಸವ ಸಂಭ್ರಮ ಆಚರಿಸಿಕೊಳ್ಳುತ್ತಿರುವುದಕ್ಕೆ ಸಹಕಾರಿಗಳು ಮತ್ತು ಅಡಿಪಾಯ ಹಾಕಿರುವ ಮಹನೀಯರ ಶ್ರಮ ಪ್ರಮುಖವಾಗಿದೆ ಎಂದರು. ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ, ಹನುಮಂತ ಮಾವಿನಮರದ, ಬಿಜೆಪಿ ತಾಲೂಕಾಧ್ಯಕ್ಷ ಶಾಂತಗೌಡ ಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಣ್ಣ ಯಲಿಗಾರ, ಜಿಪಂ ಸದಸ್ಯ ಶರಣಬಸಪ್ಪ ಹಂಚಿನಮನಿ, ಎಫ್‌.ಆರ್‌.ಪಾಟೀಲ, ಸಿದ್ದನಗೌಡ ಪಾಟೀಲ, ಡಾ.ಎಂ.ಎಚ್‌.ಚಲವಾದಿ, ಎಪಿಎಂಸಿ ಅಧ್ಯಕ್ಷ ಕುಬೇರಗೌಡ ಪಾಟೀಲ, ತಾಪಂ ಸದಸ್ಯೆ ಪೂರ್ಣಿಮಾ ಪಾಟೀಲ, ಗ್ರಾಪಂ ಅಧ್ಯಕ್ಷೆ ಲಲಿತಾ ಬಡಿಗೇರ, ಸಹಕಾರಿ ಅಭಿವೃದ್ಧಿ ಅಧಿಕಾರಿ ಸುರೇಶ ಮುಗನೂರ ಹಾಜರಿದ್ದರು. ಉಪಾಧ್ಯಕ್ಷ ವೀರಣ್ಣ ಪಾಟೀಲ ಐದು ವರ್ಷಗಳ ಪ್ರಗತಿ ಓದಿದರು. ಸಂಘದ ಮಾಜಿ ಅಧ್ಯಕ್ಷರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next