Advertisement

ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ

10:16 AM Sep 21, 2019 | Suhan S |

ಬೆಳಗಾವಿ: ಕೇಂದ್ರ ಸರ್ಕಾರ ಹೊಸದಾಗಿಜಾರಿಗೊಳಿಸಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಹಿಂಪಡೆದು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ಸದಸ್ಯರು ಶುಕ್ರವಾರ ಕಲಾಪದಿಂದ ದೂರ ಉಳಿದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ಹೊಸ ಮೋಟಾರು ವಾಹನ ಕಾಯ್ದೆಯಡಿ ಸಂಚಾರಿ ನಿಯಮ ಉಲ್ಲಂಘಿಸಿದರೆ ದೊಡ್ಡ ಪ್ರಮಾಣದ ದಂಡ ವಿಧಿ ಸಲಾಗುತ್ತಿದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿದೆ. ಹೀಗಾಗಿ ದಂಡದ ಮೊತ್ತ ಇಳಿಸಬೇಕು. ಸಂಚಾರಿ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಸವಾರರಿಗೆ ಹೆಚ್ಚು ದಂಡ ಹಾಕಿದರೆ ಕಾಯ್ದೆ ಸಮರ್ಪಕವಾಗಿ ಅನುಷ್ಠಾನ ಆಗುವುದಿಲ್ಲ. ಇದರಿಂದ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿ, ಹಣ ದುರುಪಯೋಗ ಆಗುವ ಸಾಧ್ಯತೆ ಇದೆ. ಹೀಗಾಗಿ ಕೂಡಲೇ ಈ ಕಾಯ್ದೆ ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಎ.ಜಿ. ಮುಳವಾಡಮಠ, ಉಪಾಧ್ಯಕ್ಷರಾದ ಸಿ.ಟಿ. ಮಜಗಿ, ಗಜಾನನ ಪಾಟೀಲ, ಕಾರ್ಯದರ್ಶಿ ಆರ್‌.ಸಿ. ಪಾಟೀಲ, ಜಂಟಿ ಕಾರ್ಯದರ್ಶಿ ಶಿವಪುತ್ರ ಫಟಕಲ್‌, ಕಲ್ಮೇಶ ಮಾಯ್ಯನ್ನಾಚೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next