ಮತದಾನಕ್ಕೆ ಅಡಚಣೆಯಾದ ಕಾರಣ ರಾಜ್ಯದ ಮೂರು ಮತಗಟ್ಟೆಗಳಲ್ಲಿ ಸೋಮವಾರ (ಮೇ 14) ಮರು ಮತ
ದಾನ ನಡೆಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದ್ದಾರೆ.
Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಲೊಟ್ಟಗೊಳ್ಳಹಳ್ಳಿಯ ಗಾಂಧಿ ವಿದ್ಯಾಲಯದ ಮತಗಟ್ಟೆ 2ರಲ್ಲಿ ಮತ್ತು ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎರಡು ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಲಿದೆ. ಇದಕ್ಕಾಗಿ ಎಲ್ಲ ರೀತಿಯ ಸಿದಟಛಿತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಸಂಸ್ಥೆಗಳು ಸೇರಿ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕಾರ್ಖಾನೆಗಳು, ರಾಜ್ಯ ಮತ್ತು ಕೇಂದ್ರ ಸ್ವಾಮ್ಯದ ಕೈಗಾರಿಕಾ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಈ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ ಮತದಾರರಿಗೆ ಒಂದು ದಿನದ ವೇತನ ಸಹಿತ ರಜೆ ಘೋಷಿಸಲಾಗಿದೆ.