Advertisement

ಮಣಿಪುರದ 4 ಜಿಲ್ಲೆಗಳ 28 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

11:08 AM Mar 10, 2017 | Team Udayavani |

ಇಂಫಾಲ : ಮಣಿಪುರದ ನಾಲ್ಕು ಜಿಲ್ಲೆಗಳಲ್ಲಿನ 28 ಮತಗಟ್ಟೆಗಳಲ್ಲಿ ಇಂದು ಅತ್ಯಂತ ಬಿಗಿ ಭದ್ರತೆಯಲ್ಲಿ ಮರು ಮತದಾನ ಆರಂಭಗೊಂಡಿದೆ.

Advertisement

ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದು ಮತಗಟ್ಟೆಗಳ ಮುಂದೆ ಜನರು ಗಮನಾರ್ಹ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿ ತಿಳಿಸಿದ್ದಾರೆ.

ಕಳೆದ ಮಾರ್ಚ್‌ 8ರಂದು ಎರಡನೇ ಹಂತದ ಚುನಾವಣೆಯಲ್ಲಿ ಉಕುಲ್‌, ತೆಗ್ನೊàಪಾಲ್‌, ಕಾಂಗ್‌ಪೋಪಿ ಮತ್ತು ಸೇನಾಪತಿ ಜಿಲ್ಲೆಗಳಲ್ಲಿ ಮತದಾನ ನಡೆದಿತ್ತು.

ಆದರೆ ಈ ಕ್ಷೇತ್ರಗಳಲ್ಲಿ ವ್ಯಾಪಕ ಚುನಾವಣಾ ಅಕ್ರಮಗಳು ನಡೆದಿರುವುದು ವರದಿಯಾಗಿತ್ತು. ಆ ಕಾರಣ ಈ ಕ್ಷೇತ್ರಗಳಲ್ಲಿ ಮರು ಮತದಾನಕ್ಕೆ ಆದೇಶಿಸಲಾಗಿತ್ತು ಎಂದು ಚುನಾವಣಾ ಆಯೋಗದ ಅಧಿಕಾರಿ ತಿಳಿಸಿದ್ದಾರೆ. 

ಇಂದು 28 ಮತಗಟ್ಟೆಗಳಲ್ಲಿ ಮರು ಮತದಾನವು ಬೆಳಗ್ಗೆ ಏಳು ಗಂಟೆಗೆ ಆರಂಭವಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next