Advertisement

ಜನತೆಗೆ ಜಾಗ್ರತೆ ಪಾಠ

12:03 AM Mar 20, 2021 | Team Udayavani |

ಹುಬ್ಬಳ್ಳಿ/ಬೆಂಗಳೂರು: ಕೋವಿಡ್ 2ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಿಎಂಗಳ ಜತೆ ಸಭೆ ನಡೆಸಿದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಅಲರ್ಟ್‌ ಆಗಿ ದ್ದಾರೆ. ಕಡ್ಡಾಯ ಮಾಸ್ಕ್, ಸಾಮಾ ಜಿಕ ಅಂತರ, ಸ್ಯಾನಿಟೈಸರ್‌ ಬಳಕೆಯ ಪಾಠ ಮಾಡುತ್ತಿದ್ದು, ದಂಡಾಸ್ತ್ರ ಪ್ರಯೋಗಿಸುತ್ತಿದ್ದಾರೆ.

Advertisement

ಮಾಲ್‌, ಮಾರುಕಟ್ಟೆ, ಜನನಿಬಿಡ ಪ್ರದೇಶ ಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸು ತ್ತಿದ್ದಾರೆ. ಅಂಗಡಿ ಮಾಲಕರು, ಗ್ರಾಹಕ ರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತವರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಿದ್ದಾರೆ. ಪೊಲೀಸರೂ ಕಠಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ$°, ಜಿ.ಪಂ. ಸಿಇಒ ಡಾ| ದಿಲೀಷ್‌ ಸಸಿ, ನಗರ ಪೊಲೀಸ್‌ ಆಯುಕ್ತ ಎನ್‌. ಸತೀಶಕುಮಾರ, ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ್‌ ಲೋಖಂಡೆ ಸ್ವತಃ ರಸ್ತೆಗಿಳಿದು ಅರಿವು ಮೂಡಿಸಿದರು. ಮಧ್ಯಾಹ್ನದ ಸುಡು ಬಿಸಿಲಿನಲ್ಲೂ ಹಲವೆಡೆ ಸಂಚರಿಸಿ ಸಾರ್ವಜನಿಕರಲ್ಲಿ ಕೊರೊನಾ ಬಗ್ಗೆ ಎಚ್ಚರಿಸಿದರು. ಮಾರ್ಸ್‌ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸಿ ದರು. ಕೆಲವರಿಗೆ ಸ್ವತಃ ಮಾಸ್ಕ್ ವಿತರಿಸಿ ಅರಿವು ಮೂಡಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಮಾಸ್ಕ್ ಇಲ್ಲದೆ ಓಡಾಡುತ್ತಿದ್ದ ಸಾರ್ವಜನಿಕರಿಗೆ ನಗರಸಭೆ ಪೌರಾಯುಕ್ತ ಬಿ.ಟಿ. ನಾಯಕ ನೇತೃತ್ವದಲ್ಲಿ ದಂಡ ವಿಧಿಸಲಾಯಿತು.
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಮಹಾಂ ತೇಶ್‌ ಜಿ. ಬೀಳಗಿ ಅವರು, ಕೊರೊನಾ ತಡೆಗೆ ಮಾಸ್ಕ್ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಧಾರವಾಡ ಜಿಲ್ಲಾಧಿಕಾರಿ ನಿತೀಶ ಪಾಟೀಲ್‌ ಕೂಡ ಪ್ರಮುಖ ಮಾಲ್‌ಗ‌ಳು, ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ನೀಡಿದರು.

ಉಡುಪಿ, ದಕ್ಷಿಣ ಕನ್ನಡ, ಬೀದರ್‌, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಜಿಲ್ಲಾಡಳಿತದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

Advertisement

ಇದನ್ನೂ ಓದಿ:‘ಹೆಣ್ಣಿಗೆ ಸೀರೆ ಯಾಕೆ ಅಂದ’ ಎನ್ನುತ್ತಿದ್ದಾರೆ ನಟಿ ತನುಶ್ರೀ ದತ್ತ

ಕೋವಿಡ್ ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ. ಕೇಂದ್ರದ ಮಾರ್ಗಸೂಚಿ ವಿನಾ ಉಳಿದ ಯಾವುದೇ ರೀತಿಯಲ್ಲೂ ವ್ಯಾಪಾರ ವಹಿವಾಟು ಸಹಿತ ವಾಣಿಜ್ಯ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಿಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಮದುವೆ ಸಂದರ್ಭ ತೆರೆದ ಪ್ರದೇಶಗಳಲ್ಲಿ 500 ಜನ, ಸಭಾಂಗಣಗಳಲ್ಲಿ 200 ಜನ, ಜನ್ಮದಿನ ಮತ್ತಿತರ ಆಚರಣೆ ಸಂದರ್ಭ ತೆರೆದ ಪ್ರದೇಶಗಳಲ್ಲಿ 100 ಜನ, ಸಭಾಂಗಣಗಳಲ್ಲಿ 50 ಜನ, ಅಂತ್ಯಕ್ರಿಯೆಗಳಲ್ಲಿ 50 ಜನ, ಧಾರ್ಮಿಕ ಮತ್ತು ರಾಜಕೀಯ ಆಚರಣೆ ತೆರೆದ ಪ್ರದೇಶಗಳಲ್ಲಿ 500 ಜನ ಪಾಲ್ಗೊಳ್ಳಲು ಮಾತ್ರ ಅವಕಾಶ ಎಂದು ಇತ್ತೀಚೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next