Advertisement
ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಡಾ| ಸುಧಾಕರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ? ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು.
ಮುಡಾ ಮಾಜಿ ಆಯುಕ್ತ ದಿನೇಶ್ ಅಮಾನತು ವಿಚಾರ ನನಗೆ ಗೊತ್ತಿಲ್ಲ. 2009ರ ಹಿಂದಿನ ಬಡಾವಣೆಗೆ 50:50 ಅನ್ವಯ ಆಗುವುದಿಲ್ಲ ಎಂಬ ಅಂಶ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ. ಮೊದಲು ಆದೇಶ ನೋಡುತ್ತೇನೆ. ಆದರ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಅಮಾನತು ಮಾಡಿರುವುದು ಮಾತ್ರ ಗೊತ್ತಿದೆ. ಇಬ್ಬರು ಆಯುಕ್ತರ ಪಾತ್ರ
ಏನಿದೆ ಎಂಬುದು ತನಿಖಾ ವರದಿಯಲ್ಲಿ ತಿಳಿಯಲಿದೆ ಎಂದರು. ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯ ಮಂತ್ರಿಯಾಗುವುದಾಗಿ ದೇಶಪಾಂಡೆ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ ಎಂದರು.
Related Articles
ರಾಯಚೂರು: ಕಾಂಗ್ರೆಸ್ನವರು ಬರೀ ಹುಲಿ ಬಂತು ಹುಲಿ ಎನ್ನುವ ಜಾಯ ಮಾನದವರು. ಎಷ್ಟು ಜನರಿಗೆ ಕಿವಿಯಲ್ಲಿ ಹೂ ಇಡುತ್ತಾರೆ. ಕೋವಿಡ್ ತನಿಖೆ ಅಗತ್ಯ ಇದೆಯಾ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸುದ್ದಿಗಾರರ ಬಳಿ ಪ್ರಶ್ನಿಸಿದರು.
ನಾವು ಎಷ್ಟೇ ದೊಡ್ಡವರಾದರೂ ಕಾನೂನಿನ ಎದುರು ಎಲ್ಲರೂ ಒಂದೇ. ಎಚ್.ಡಿ. ಕುಮಾರ ಸ್ವಾಮಿ ರಾಜ್ಯದ ಅಭಿವೃದ್ಧಿ ಚಿಂತಕರಲ್ಲಿ ಒಬ್ಬರು. ಯಾರೂ ಯೂಟರ್ನ್ ಹೊಡೆದಿಲ್ಲ. ಮೂರ್ನಾಲ್ಕು ದಿನದಲ್ಲಿ ಎಲ್ಲವೂ ಹೊರಬರುತ್ತದೆ. ರಾಜ್ಯಪಾಲರ
ತೀರ್ಮಾನ ಸರಿಯಾಗಿಯೇ ಇದೆ ಎಂದರು.
Advertisement