ಬೆಂಗಳೂರು: ಇತ್ತೀಚೆಗೆ ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ವರದಿ ಸಲ್ಲಿಸಿತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ವರದಿಯನ್ನು ಸಲ್ಲಿಸಿತು.
ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಹೈಪ್ರೊಫೈಲ್ ಡ್ರಗ್ಸ್ ಜಾಲ: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ
ಆಗಸ್ಟ್ 11ರಂದು ಕಾವಲ್ ಬೈರಸಂದ್ರ, ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸ, ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಗಲಭೆಕೋರರು ದಾಳಿ ನಡೆಸಿ ಗಲಭೆ ನಡೆಸಿದ್ದರು. ಈ ಕುರಿತು ನೂರಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ.