Advertisement

ಸೆಪ್ಟೆಂಬರ್‌ ಅಂತ್ಯಕ್ಕೆ ವರದಿ ಸಲ್ಲಿಕೆ

03:17 AM Jul 05, 2019 | Sriram |

ದಾವಣಗೆರೆ: ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾದ ಬಗ್ಗೆ ಸಮಗ್ರ ಕಾರಣ ಸಂಗ್ರಹಿಸಿ, ಸೆಪ್ಟೆಂಬರ್‌ ಅಂತ್ಯಕ್ಕೆ ಪಕ್ಷದ ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಲಿದೆ.

Advertisement

2018ರ ವಿಧಾನಸಭಾ ಹಾಗೂ 2019ರ ಲೋಕಸಭಾ ಚುನಾವಣೆ ಯಲ್ಲಿ ಪಕ್ಷಕ್ಕಾದ ಹಿನ್ನಡೆ ಬಗ್ಗೆ ಕಾರಣ ತಿಳಿಯಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇಮಿಸಿರುವ ಬಸವರಾಜ ರಾಯರಡ್ಡಿ ನೇತೃತ್ವದ ಸತ್ಯಶೋಧನಾ ಸಮಿತಿ, 2ನೇ ಹಂತದ ಪ್ರವಾಸ ಕೈಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ರಾಜ್ಯದ 26 ಲೋಕಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ, ಸೋಲಿನ ಕಾರಣ ಪರಾಮರ್ಶೆ ನಡೆಸಲಿದೆ.

ಗುರುವಾರ ನಗರದಲ್ಲಿ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಜನಪ್ರತಿನಿಧಿ ಗಳು ಹಾಗೂ ಕಾರ್ಯಕರ್ತರ ಸಭೆಗೂ ಮುನ್ನ ಸಮಿತಿ ಸಂಚಾಲಕ ಬಸವರಾಜ ರಾಯರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಸತ್ಯಶೋಧನಾ ಸಮಿತಿಯು ಪಕ್ಷದ ಸಂಘಟನೆಗೆ ಕೈಗೊಳ್ಳಬೇಕಾದ ಕ್ರಮದ ಜತೆಗೆ ಜನರ ಅಭಿಪ್ರಾಯ ಏನಿದೆ ಎಂಬುದನ್ನು ಅರಿಯಲಿದೆ. ಮತದಾರರು ಏನು ಬದಲಾವಣೆ ಬಯಸಿದ್ದಾರೆ ಎಂಬುದರ ಬಗ್ಗೆ ವರದಿ ಸಲ್ಲಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next