Advertisement

ಹಳೆಯಂಗಡಿ : ತ್ಯಾಜ್ಯ ಘಟಕಕ್ಕೆ ಜನಪ್ರತಿನಿಧಿಗಳ ನಿಯೋಗ ಭೇಟಿ

09:45 AM May 25, 2020 | mahesh |

ಹಳೆಯಂಗಡಿ: ನಿರ್ಮಾಣ ಹಂತದಲ್ಲಿರುವ ಇಲ್ಲಿನ ಹಳೆಯಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಘನ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್‌ ಸದಸ್ಯ ವಿನೋದ್‌ಕುಮಾರ್‌ ಬೊಳ್ಳೂರು ಆವರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿತು.

Advertisement

ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಅಂದಾಜು 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ.

ತಾಲೂಕು ಪಂಚಾಯತ್‌ ಸದಸ್ಯ ಜೀವನ್‌ ಪ್ರಕಾಶ್‌ ಕಾಮೆರೊಟ್ಟು, ಪಡುಪಣಂಬೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಮೋಹನ್‌ ದಾಸ್‌, ಜಿಲ್ಲಾ ಪಂಚಾಯತ್‌ ಎಂಜಿನಿಯರ್‌ಗಳಾದ ನರೇಂದ್ರ ಬಾಬು, ನರೇಂದ್ರ, ಪ್ರಶಾಂತ್‌ ಆಳ್ವ, ಹಳೆಯಂಗಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಶ್ರೀಶೈಲ ಮೊದಲಾದವರು ಜತೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next