Advertisement

11,000 ಅಡಿ ಎತ್ತರ, ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಯೋಧರ ಗಣರಾಜ್ಯ ಸಂಭ್ರಮ: ವಿಡಿಯೋ

04:06 PM Jan 26, 2022 | Team Udayavani |

ಹೊಸದಿಲ್ಲಿ: ಭಾರತವು ಇಂದು 73 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಇದೇ ವೇಳೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಉತ್ತರಾಖಂಡದ ಔಲಿಯಲ್ಲಿ ಹಿಮಾಲಯದ ಇಳಿಜಾರುಗಳಲ್ಲಿ ವಿಶಿಷ್ಟವಾದ ಮೆರವಣಿಗೆಯೊಂದಿಗೆ ಈ ಗಣರಾಜ್ಯ ಸಂಭ್ರಮ ಆಚರಿಸಿದೆ.

Advertisement

ಸುದ್ದಿ ಸಂಸ್ಥೆ ಎಎನ್ಐ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಐಟಿಬಿಪಿ ತುಕಡಿಯು ಮೈನಸ್ 20 ಡಿಗ್ರಿ ಸೆಲ್ಸಿಯಸ್‌ನಲ್ಲಿ 11,000 ಅಡಿ ಎತ್ತರದಲ್ಲಿ ಇಳಿಜಾರುಗಳಲ್ಲಿ ಸ್ಕೀಯಿಂಗ್ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ:ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

ಐಟಿಬಿಪಿ – ಇದನ್ನು ‘ಹಿಮಾಲಯದ ಸೆಂಟಿನೆಲ್ಸ್’ ಎಂದು ಕರೆಯಲಾಗಿದೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜದೊಂದಿಗೆ ತನ್ನ ಸಿಬ್ಬಂದಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳನ್ನು ಪೋಸ್ಟ್ ಮಾಡಿದೆ.

Advertisement

ಈತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಗಣರಾಜ್ಯೋತ್ಸವದಂದು ದೇಶಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.

“ನಿಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next