Advertisement

ಮಂಗಳೂರು, ಉಡುಪಿಯಲ್ಲಿ ಗಣರಾಜ್ಯೋತ್ಸವ ಆಚರಣೆ

09:58 AM Jan 26, 2023 | Team Udayavani |

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ.26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

Advertisement

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

74ನೇ ಗಣರಾಜ್ಯೋತ್ಸವದ ಅಂಗವಾಗಿ ಕವಾಯತು ಮೈದಾನದಲ್ಲಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಧ್ವಜಾರೋಹಣ ನೆರವೇರಿಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್,‌ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನವಣೆ ಮತ್ತಿತರ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

Advertisement

ಉಡುಪಿಯಲ್ಲಿ ಗಣರಾಜ್ಯೋತ್ಸವ ಆಚರಣೆ:

ಅಜ್ಜರಕಾಡಿನಲ್ಲಿನ ಹುತಾತ್ಮ ಸ್ಮಾರಕಕ್ಕೆ ಸಚಿವ ಅಂಗಾರ ಗೌರವ ಸಲ್ಲಿಸಿದರು.

ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಸಿ.ಇ.ಓ. ಪ್ರಸನ್ನ, ಮೈಸೂರು ಎಲೆಕ್ಟ್ರಿಕಲ್ ಇಂಡಷ್ಟ್ರೀಸ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಎಸ್ಪಿ ಹಾಕೆ ಅಕ್ಷಯ್ ಮಚ್ಹಿಂದ್ರ, ಮಾಜಿ  ಸೈನಿಕರು ಮತ್ತಿತರರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next