Advertisement

ಅಚ್ಚುಕಟ್ಟುತನದಿಂದ ಕಾರ್ಯ ನಿರ್ವಹಿಸಿ: ಡಿಸಿ

02:50 PM Jan 03, 2021 | Team Udayavani |

ಧಾರವಾಡ: ಜಿಲ್ಲಾಡಳಿತದಿಂದ ಜ.26 ರಂದು 72ನೇ ಗಣರಾಜ್ಯೋತ್ಸವವನ್ನು ಅದ್ಧೂರಿ-ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕಾರ್ಯಕ್ರಮ ಆಯೋಜನೆಗೆ ವಿವಿಧ ಇಲಾಖೆಗಳು ತಮಗೆ ವಹಿಸಿದಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವದ ನಿಮಿತ್ಯ ಜ.25 ರಿಂದ 27ರ ವರೆಗೆ ನಗರದಎಲ್ಲ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿದೀಪಾಲಂಕಾರ ಮಾಡಬೇಕು. ಜ.26ರಂದು ಬೆಳಿಗ್ಗೆ 7:30ಕ್ಕೆ ಎಲ್ಲಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8:30ಕ್ಕೆ ಆರ್‌.ಎನ್‌. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಸಮಾವೇಶಗೊಳ್ಳಬೇಕು. ಬೆಳಿಗ್ಗೆ 9;00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸುವರು. ಪೊಲೀಸ್‌ ಹಾಗೂ ವಿವಿಧ ದಳಗಳ ಸದಸ್ಯರು ಪಥ ಸಂಚಲನ ನಡೆಸಿ, ಗೌರವ ಸಲ್ಲಿಸುವರು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲ : ಕೋವಿಡ್‌ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಿಲ್ಲ, ಆದರೇ 10 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕಕಾರ್ಯಕ್ರಮ ಪ್ರದರ್ಶಿಸಲು ಇಚ್ಚಿಸಿದಲ್ಲಿ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವು ದೆಂದು ಜಿಲ್ಲಾಧಿ ಕಾರಿಗಳು ತಿಳಿಸಿದರು.ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತರಅಧ್ಯಕ್ಷತೆಯ ಆಯ್ಕೆ ಸಮಿತಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ, ಶಿಫಾರಸು ಮಾಡುವಜಿಲ್ಲೆಯ ಐವರು ಸಾಧಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸ ಲಾಗುವುದು. ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗುತ್ತದೆ ಎಂದರು.

ಗಣರಾಜ್ಯೋತ್ಸವ ದಿನ ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವರು ನೀಡುವ ಸಾರ್ವಜನಿಕ ಸಂದೇಶದ ಭಾಷಣಕ್ಕೆ ಎಲ್ಲ ಇಲಾಖೆಗಳ ಸಾಧನೆಗಳ ಕುರಿತು ಸಂಕ್ಷಿಪ್ತ ವಿವರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಇ-ಮೇಲ್‌ ಗೆ ಜನವರಿ 13, 2021 ರೊಳಗೆ ಕಳುಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಅಪರಾಧ ಮತ್ತು ಸಂಚಾರಿ ವಿಭಾಗದ ಉಪ ಪೊಲೀಸ್‌ಆಯುಕ್ತ ಆರ್‌.ಬಿ .ಬಸರಗಿ ವೇದಿಕೆಯಲ್ಲಿದ್ದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸ್ವಾಗತಿಸಿ, ಕಾರ್ಯಕ್ರಮಗಳ ಆಯೋಜನೆ ಹಾಗೂ ಇಲಾಖೆಗಳ ಜವಾಬ್ದಾರಿ ಕುರಿತು ವಿವರಿಸಿದರು.

ಉಪವಿಭಾಗಾಧಿಕಾರಿ ಡಾ| ಗೋಪಾಲ ಕೃಷ್ಣ ಬಿ., ಡಿಎಆರ್‌ ಡಿವೈಎಸ್‌ಪಿ ರಾಮನಗೌಡ ಹಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ಯಶವಂತ ಮದೀನಕರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್‌.ಬಿ. ಚೌಡಣ್ಣವರ, ಕನ್ನಡ ಮತ್ತುಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಶೆಟ್ಟರ, ತಹಶೀಲ್ದಾರರಾದ ಸಂತೋಷ ಬಿರಾದಾರ, ಪ್ರಕಾಶನಾಶಿ, ಅಶೋಕ ಶಿಗ್ಗಾಂವಿ, ನವೀನ ಹುಲ್ಲೂರ, ಅಮರೇಶ ಪಮ್ಮಾರ,ಕೊಟ್ರೇಶ್‌ ಗಾಳಿ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next