Advertisement

ಕರಾವಳಿ ಸಮಗ್ರ ಅಭಿವೃದ್ಧಿಗೆ ಚಿಂತನೆ

10:11 AM Jan 28, 2020 | Team Udayavani |

ಉಡುಪಿ: ಮೀನುಗಾರಿಕೆಗೆ ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಒದಗಿಸುವ ಮೂಲಕ ಕರಾವಳಿ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ರವಿವಾರ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು,ಕರಾವಳಿಯು ರಾಜ್ಯದ ಆರ್ಥಿಕತೆ ಹೆಚ್ಚಿನ ಬಲ ನೀಡುತ್ತಿದೆ. ಕರಾವಳಿ ಯನ್ನು ಪೂರ್ಣ ಪ್ರಮಾಣ ದಲ್ಲಿ ಇದುವರೆಗೂ ಬಳಸಿಕೊಳ್ಳಲು ಸಾಧ್ಯ ವಾಗಿಲ್ಲ ಎಂದರು.

194 ಕಿ.ಮೀ. ರಸ್ತೆ ಪೂರ್ಣ
ಸಣ್ಣ ನೀರಾವರಿ ಇಲಾಖೆಯಿಂದ ಜಿಲ್ಲೆಯಲ್ಲಿ 50 ಕೋ.ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗುತ್ತಿದೆ. ಎಸ್‌ಎಫ್ಸಿ ಅನುದಾನದ ಮೂಲಕ ಎಲ್ಲ ನಗರ ಸ್ಥಳೀಯ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ವಾರಾಹಿಯಿಂದ ಉಡುಪಿ ನಗರಕ್ಕೆ 24ಗಿ7 ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ 157 ಕೋ.ರೂ. ವೆಚ್ಚದಲ್ಲಿ 194 ಕಿ.ಮೀ. ರಸ್ತೆ ಪೂರ್ಣಗೊಂಡಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸರಕಾರ ದೇಶದ ಶಾಂತಿ ಸುವ್ಯವಸ್ಥೆಗೆ ಮೊದಲ ಪ್ರಾಶಸ್ತÂ ನೀಡಿದ್ದು, ಸರ್ವರಿಗೂ ಸಮಾನತೆ ನೀಡಿದೆ. ಅಭಿವೃದ್ಧಕೆಲವು ಶಕ್ತಿಗಳು ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಹುನ್ನಾರ ಮಾಡುತ್ತಿವೆ. ಇಂತಹ ಯಾವುದೇ ಕೃತ್ಯಗಳಿಗೆ ಅವಕಾಶ ನೀಡದೆ ದೇಶವನ್ನು ಭಯೋತ್ಪಾದನ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದರು.

ರಾಜ್ಯಪಾಲರಿಂದ ಅತ್ಯುತ್ತಮ ಚುನಾವಣ ಅಧಿಕಾರಿ ಪ್ರಶಸ್ತಿ ಪುರಸ್ಕೃತ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರನ್ನು ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು ಸಮ್ಮಾನಿಸಿದರು.

Advertisement

ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಆಕರ್ಷಕ ಮನೋರಂಜನ ಕಾರ್ಯಕ್ರಮ ನಡೆಸಿಕೊಟ್ಟರು. ಎನ್‌ಸಿಸಿ ಮತ್ತಿತರ ವಿದ್ಯಾರ್ಥಿಗಳು, ಪೊಲೀಸರಿಂದ ಶಿಸ್ತುಬದ್ಧ ಪಥಸಂಚಲನ ನಡೆಯಿತು. ಶಾಸಕ ರಘುಪತಿ ಭಟ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್‌, ಜಿ.ಪಂ. ಸಿಇಒ ಪ್ರೀತಿ ಗೆಹೊÉàಟ್‌ ಉಪಸ್ಥಿತರಿದ್ದರು.

ದೇಗುಲ,ಆರೋಗ್ಯ ಪ್ರವಾಸೋದ್ಯಮಕ್ಕೆ ಒತ್ತು
ಕರಾವಳಿಯ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಆಮದು -ರಫ್ತು ಪ್ರಮಾಣವನ್ನು ಹೆಚ್ಚಿಸಲಾಗುವುದು. ಒಳನಾಡು ಜಲ ಸಾರಿಗೆ ಮತ್ತು ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸೋದ್ಯವನ್ನು ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಿ ಹೆಚ್ಚಿನ ಸಂಖ್ಯೆಯಲ್ಲಿ ದೇಶ -ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಬೇಕಿದೆ. ದೇಗುಲ ಮತ್ತು ಆರೋಗ್ಯ ಪ್ರವಾಸೋದ್ಯಮವನ್ನು ಇನ್ನಷ್ಟು ವಿಸ್ತರಿಸಬೇಕಾಗಿದೆ ಎಂದು ಸಚಿವ ಬೊಮ್ಮಾಯಿ ಅಭಿಪ್ರಾಯಪಟ್ಟರು.

1.39 ಲಕ್ಷ ರೈತರಿಗೆ
ಕೃಷಿ ಸಮ್ಮಾನ್‌
ಜಿಲ್ಲೆಯಲ್ಲಿ ನೆರೆ ಹಾವಳಿ ಯಿಂದ ಸಂಭವಿಸಿದ ಹಾನಿಗಾಗಿ ಪಂಚಾಯತ್‌ ರಾಜ್‌ ಇಲಾಖೆ ಯಿಂದ 29 ಕೋ.ರೂ. ಮತ್ತು ವಿವಿಧ ಕಾಮಗಾರಿಗಳಿಗಾಗಿ 32 ಕೋ.ರೂ. ಬಿಡುಗಡೆ ಮಾಡ ಲಾಗಿದೆ. ಜಿಲ್ಲೆಯ 1.90 ಲಕ್ಷ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ಯೋಜನೆ ಯಡಿ 1.39 ಲಕ್ಷ ರೈತರಿಗೆ ಪ್ರೋತ್ಸಾಹ ಧನ ನೀಡಲಾಗಿದೆ ಎಂದು ಸಚಿವ ಬೊಮ್ಮಾಯಿ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next