Advertisement
ಬಿಜೆಪಿ ಅಭ್ಯರ್ಥಿ ಆರ್.ರಘು ಕೌಟಿಲ್ಯ, ಕಾಂಗ್ರೆ ಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ, ಜೆಡಿಎಸ್ ಉಮೇ ದುವಾರ ಸಿ.ಎನ್. ಮಂಜೇಗೌಡರ ಗೆಲು ವು ಮೂರು ಮಾಜಿ ಮುಖ್ಯಮಂತ್ರಿಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಆಪ್ತರು. ಯಡಿಯೂರಪ್ಪ ಅವರೇ ರಘು ಅವರಿಗೆ ಟಿಕೆಟ್ ಕೊಡಿಸಿದ್ದಾರೆ.
Related Articles
Advertisement
ಇಂದು ಸಿದ್ದರಾಮಯ್ಯ ಸಭೆ:
ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಅವರು ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿದ್ದ ಆರ್.ಧರ್ಮಸೇನ ಅವರಿಗೆ ಟಿಕೆಟ್ ನಿರಾಕರಿಸಿ ತಿಮ್ಮಯ್ಯರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಮಾಜಿ ಸಿಎಂ ಸಿದ್ದರಾಮಯ ಪಕ್ಷದ ಸ್ಥಳೀಯ ಶಾಸಕರು, ಪ್ರಮುಖ ನಾಯಕರ ಅಭಿಪ್ರಾಯ ಆಲಿಸಿ ಟಿಕೆಟ್ ಕೊಡಿಸಿದ್ದಾರೆ. ಪಕ್ಷದ ಹೈಕಮಾಂಡ್ ಮೈಸೂರು ಕ್ಷೇತ್ರದ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಕೈಗೊ ಳ್ಳುವ ನಿರ್ಧಾರವೇ ಅಂತಿಮ ಎಂದಿತ್ತು. ಹೀಗಾಗಿ, ಡಾ.ತಿಮ್ಮಯ್ಯ ಅವರ ಗೆಲುವಿನ ಹೊಣೆಗಾರಿಕೆ ಈಗ ಸಿದ್ದರಾಮಯ್ಯ ಅವರ ಮೇಲೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಶುಕ್ರವಾರಮೈಸೂರು, ಚಾಮರಾಜನಗರ ಜಿಲ್ಲೆಗಳ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸಭೆಯನ್ನು ಖಾಸಗಿ ಹೋಟೆಲ್‌ನಲ್ಲಿ ಕರೆದಿದ್ದಾರೆ. ಅಭ್ಯರ್ಥಿ ಗೆಲುವಿಗೆ ತಂತ್ರಗಳ ಕುರಿತು ಚರ್ಚಿಸಲಿದ್ದಾರೆ.
ಜಿಟಿಡಿ ನಡೆಯೇ ಕುತೂಹಲ
ಬಿಜೆಪಿ ತನ್ನ ಅಭ್ಯರ್ಥಿ ಗೆಲುವಿಗೆ ರಣತಂತ್ರ ರೂಪಿಸುತ್ತಿದೆ. ಜೆಡಿ ಎಸ್‌ನಲ್ಲಿರುವ ಸಂದೇಶ್ ನಾಗರಾಜ್ ರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಜೆಡಿಎಸ್ ಉಮೇದುವಾರ ಮಂಜೇಗೌಡ ಅವರು ಜೆಡಿಎಸ್‌ನಿಂದ ದೂರ ಸರಿದಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ತೆರಳಿ ಅವರ ಬೆಂಬಲ ಯಾಚಿಸಿದ್ದಾರೆ.
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ತಮ್ಮ ಹಾಗೂ ತಮ್ಮ ಪುತ್ರ ಜಿ.ಡಿ.ಹರೀಶ್‌ಗೌಡ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್‌ಗೆ ಒಪ್ಪಿದರೆ ಆ ಪಕ್ಷ ಸೇರುವುದಾಗಿ ಈಗಾಗಲೇ ಹೇಳಿದ್ದಾರೆ. ಹೀಗಾಗಿ, ಈ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ ಅವರು ಯಾರನ್ನು ಬೆಂಬಲಿಸುತ್ತಾರೆಂಬುದು ಕುತೂಹಲ ಮೂಡಿಸಿದೆ.
– ಕೂಡ್ಲಿ ಗುರುರಾಜ