Advertisement

ಪ್ಲಾಸ್ಟಿಕ್‌ ಧ್ವಜ ಬಳಕೆಯ ಮೇಲೆ ನಿರ್ಬಂಧ ಹೇರಲು ಮನವಿ

11:39 AM Jan 17, 2018 | Team Udayavani |

ಮಹಾನಗರ: ಪ್ರಜಾಪ್ರಭುತ್ವ ದಿನದಂದು ರಾಷ್ಟ್ರ ಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟುವಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದೆ.

Advertisement

ರಾಷ್ಟ್ರಧ್ವಜವು ದೇಶಭಕ್ತಿಯ ಪ್ರತೀಕವಾಗಿದ್ದು ಸಮಸ್ತ ಭಾರತೀಯರಿಗೆ ಪೂಜನೀಯವಾಗಿದೆ. ಆದರೆ ಇದರ ಬಳಕೆಯ ಮೇಲೆ ನಿಯಂತ್ರಣವಿಲ್ಲ. ಇದರಿಂದ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪ್ಲಾಸ್ಟಿಕ್‌ ಅಥವಾ ಕಾಗದದ ಧ್ವಜಗಳು ರಸ್ತೆಯ ಮೇಲೆ, ಸಣ್ಣ ಅಂಗಡಿಗಳಲ್ಲಿ ಮಾರಾಟಕ್ಕೆ ಕಂಡು ಬರುತ್ತವೆ ಎಂದು ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗೇರ ಹೇಳಿದರು.

ಪರಿಸರ ಮಾಲಿನ್ಯ ಮತ್ತು ರಾಷ್ಟ್ರಧ್ವಜದ ವಿಡಂಬನೆಯನ್ನು ತಡೆಗಟ್ಟಲು ಪ್ಲಾಸ್ಟಿಕ್‌ ಧ್ವಜಗಳ ಮೇಲೆ ನಿರ್ಬಂಧ ಹೇರುವುದು ಅವಶ್ಯಕವಾಗಿದೆ ಎಂದು ಮನವಿ ಮಾಡಿದ್ದಾರೆ. ಮನವಿ ನೀಡುವ ವೇಳೆ ಸಮಿತಿಯ ಚಂದ್ರ ಮೊಗೇರ, ಪ್ರಭಾಕರ್‌ ನಾಯ್ಕ, ಮಾಂಗಿರಾಮ್‌, ಯೋಗೀಶ್‌, ರಾಜೇಶ್‌ ಸೌ. ಪ್ರಮೀಳ, ತುಳುನಾಡ ರಕ್ಷಣಾ ಸಮಿತಿಯ ಜ್ಯೋತಿ ಜೈನ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next