Advertisement

ನೀಲಾನಗರಕ್ಕೆ ಹೆಚ್ಚುವರಿ ಆಂಗ್ಲ ಮಾಧ್ಯಮ ತರಗತಿಗೆ ಮನವಿ

09:37 AM Jun 17, 2019 | Team Udayavani |

ಶಿರೂರ: ಸರಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿರುವ ಆಂಗ್ಲ ಮಾಧ್ಯಮದ ಶಿಕ್ಷಣಕ್ಕೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಒಲವು ವ್ಯಕ್ತವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಲು ಮುಂದಾಗಿದ್ದಾರೆ.

Advertisement

ಬಂಜಾರಾ ಬಾಂಧವರು ವಾಸಿಸುವ ನೀಲಾನಗರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಲಾಗಿದ್ದು, ಇಲ್ಲಿ ಪಾಲಕರು ತಮ್ಮ ಮಕ್ಕಳನ್ನು ದಾಖಲಾತಿಗೆ ಕಸರತ್ತು ನಡೆಸಿದ್ದು ಒಂದೇ ದಿನದಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮಕ್ಕೆ 60 ಮಕ್ಕಳು ಪ್ರವೇಶಾತಿಯ ಅರ್ಜಿ ಪಡೆದು ದಾಖಲಾತಿಗೆ ಮುಂದಾಗಿದ್ದಾರೆ. ಸರಕಾರ ಬರಿ 30 ಮಕ್ಕಳಿಗೆ ಅನುಮತಿ ನೀಡಿದ್ದರಿಂದ ಪಾಲಕರು ಗೊಂದಲದಲ್ಲಿದ್ದಾರೆ. ಆದರೆ, ಪಾಲಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಉಳಿದ ಹೆಚ್ಚುವರಿ ಮಕ್ಕಳಿಗೂ ಇನ್ನೊಂದು ಆಂಗ್ಲ ಮಾಧ್ಯಮ ತರಗತಿ ನೀಡಬೇಕೆಂದು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ಕನ್ನಡ ಮಾಧ್ಯಮಕ್ಕೆ ಮಕ್ಕಳ ಕೊರತೆ: ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಒಡೆಯುವ ಉದ್ದೇಶದಿಂದ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಿದೆ. ಇದರಿಂದ ಕನ್ನಡ ಮಾಧ್ಯಮಕ್ಕೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ನೀಲಾನಗರ ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಬರಿ 8 ಮಕ್ಕಳು ಮಾತ್ರ ದಾಖಲಾತಿ ಪಡೆದಿದ್ದಾರೆ. ಅದೇ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭವಾಗಿದ್ದರಿಂದ ಕನ್ನಡ ಮಾಧ್ಯಮಕ್ಕೆ ಬರಲು ಮಕ್ಕಳು ಹಿಂಜರೆಯುತ್ತಿದ್ದಾರೆ.

ಪಠ್ಯಪುಸ್ತಕ ಇಲ್ಲ: ಸದ್ಯ ಆರಂಭವಾಗಿರುವ ಆಂಗ್ಲ ಮಾಧ್ಯಮ ಶಿಕ್ಷಣ ಮಾಧ್ಯಮದ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ದೊರೆತಿಲ್ಲ, ವರ್ಗ ಶಿಕ್ಷಕಿ ಪ್ರೇಮಾ ಕಟ್ಟಿ ತರಬೇತಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next