ಕೋಲಾರ: ಡಿಸೆಂಬರ್ 23ರ ರೈತ ದಿನಾಚರಣೆ ಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿ ಸಲು ಘೋಷಣೆ ಮಾಡಿ, ಕಿಸಾನ್ ಸಮ್ಮಾನ್ ಯೋಜನೆಯನ್ನು ಮುಂದುವರಿಸಬೇಕು ಹಾಗೂ ಜಿಲ್ಲೆಯಲ್ಲಿ ಪ್ರತಿ ಗ್ರಾಪಂಗೆ ಒಂದು ರಾಗಿ ಖರೀದಿ ಕೇಂದ್ರವನ್ನು ಆರಂಭ ಮಾಡಬೇಕೆಂದು ಆಗ್ರಹಿಸಿ ರೈತ ಸಂಘದಿಂದಕೃಷಿ ಸಚಿವ ಬಿ.ಸಿ.ಪಾಟೀಲ್‌ರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ ಮನವಿ ಸಲ್ಲಿಸಿ ಮಾತನಾಡಿ, ರೈತರು ಒಂದಲ್ಲಾ ಒಂದುಸಮಸ್ಯೆಗಳನ್ನು ವರ್ಷವಿಡೀ ಅನುಭವಿಸುತ್ತಲೇ ಇದ್ದರೂ ಸಹ ಅವರ ನೆರವಿಗೆ ಸರ್ಕಾರಗಳು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂಬರುವ ಡಿಸೆಂಬರ್ ತಿಂಗಳ 23ರಂದು ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಆ ವೇಳೆಗಾದರೂ ಸರ್ಕಾರಿ ಕಾರ್ಯಕ್ರಮವನ್ನಾಗಿ ಘೋಷಿಸಲು ಸಚಿವರು ಸಂಬಂಧಪಟ್ಟವರ ಗಮನಕ್ಕೆ ತಂದು ಆದೇಶ ಹೊರಡಿಸಬೇಕಾಗಿ ಆಗ್ರಹಿಸಿದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿಯೂ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತ ದಿನಾಚರಣೆ, ರಾಗಿ ಖರೀದಿ ಕೇಂದ್ರ ಆರಂಭ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು.ಕಿಸಾನ್ ಸಮ್ಮಾನ್ ಯೋಜನೆ ಬಗ್ಗೆಮತ್ತೆ ಪರಿಶೀಲನೆ ನಡೆಸಿ ಕ್ರಮ ಕೈಳ್ಳುವ ಭರವಸೆ ನೀಡಿದರು.
ಮನವಿ ನೀಡುವಾಗ ಉಸ್ತುವಾರಿ ಸಚಿವಎಚ್.ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐತಾಂಡಹಳ್ಳಿಮುನ್ನಾ, ಸ್ವಸ್ತಿಕ್ ಶಿವು,ಕೋಲಾರ ತಾಲೂಕು ಅಧ್ಯಕ್ಷ ಈ ಕಂಬಳ್ಳಿ ಮಂಜುನಾಥ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಉಪಾಧ್ಯಕ್ಷ ಜಾವೀದ್, ಮಂಗಸಂದ್ರ ತಿಮ್ಮಣ್ಣ, ವಕ್ಕಲೇರಿ ಹನುಮಯ್ಯ, ವಿ.ನಳಿನಿ, ಸುಪ್ರಿಂ ಚಲ ಮತ್ತಿತರರು ಉಪಸ್ಥಿತರಿದ್ದರು.