ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.
Advertisement
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ ಕಚೇರಿ ಎದುರು ಬಿಜೆಪಿ ತಾಲೂಕು ಘಟಕ ಕಳೆದ 22 ದಿನಗಳಿಂದನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು. 10 ಸಾವಿರ ಜನರೊಂದಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಜನಪರವಾದ ವಿವಿಧ ಬೇಡಿಕೆ ಈಡೇರಿಕೆಗಾಗಿ 22 ದಿನಗಳಿಂದ ತಾಲೂಕು ಕಚೇರಿ ಎದುರು ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಸರ್ಕಾರದ ಕಣ್ಣು ತೆರೆಸುವುದಕ್ಕಾಗಿ ಸುಂಕೇಶ್ವರಹಾಳ ಬಳಿ ರಸ್ತೆತಡೆ ಮಾಡಿದರೂ, ನಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಇದನ್ನು
ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಹೇಳಿದರು. ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ
ಪಾಟೀಲ ಜೇರಬಂಡಿ, ಬಸನಗೌಡ ಹಾಲವೆಂಕಟಾಪುರ, ಪುರಸಭೆ ಸದಸ್ಯ ಚಂದ್ರಶೇಖರ ಚಲುವಾದಿ, ನಾಗರಾಜ
ಅಕ್ಕರಕಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದರು.